LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಎಲ್ಲರ ಒಮ್ಮತದಿಂದ ಮಹನೀಯರ ಜಯಂತಿ ಆಚರಣೆ

ಬೆಂ.ಗ್ರಾ.ಜಿಲ್ಲೆ. ದೇವನಹಳ್ಳಿ: ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರುಗಳ ಜಯಂತಿಯನ್ನು ಸಮಾಜದ ಮುಖಂಡರ ಎಲ್ಲರ ಒಮ್ಮತದಿಂದ ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ, ವಿಜ್ರಂಭಣೆಯಿAದ ಆಚರಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿಡಾ. ಬಾಬು ಜಗಜೀವನ ರಾಂ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು
ದಿನಾಂಕ 05.04.2026 ರಂದು ಡಾ. ಬಾಬು ಜಗಜೀವನ ರಾಂ ಅವರ 119ನೇ ಜಯಂತಿ ಹಾಗೂ ದಿನಾಂಕ 14.04.2026 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ ಮಾಡಲಾಗುತ್ತಿದೆ. ಎರಡೂ ಮಹನೀಯರ ಆದರ್ಶಗಳು, ಸಮಾಜಮುಖಿ ಚಿಂತನೆಗಳು ಹಾಗೂ ಸಮಾನತೆಗಾಗಿ ನೀಡಿದ ಮಹತ್ವದ ಕೊಡುಗೆಗಳನ್ನು
ಸ್ಮರಿಸಿ, ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಮತ್ತು ಗೌರವಯುತವಾಗಿ ಆಚರಿಸಬೇಕು.
ಸಮಾಜದ ಮುಖಂಡರೆಲ್ಲರು ಮಹನಿಯರ ಜಯಂತಿಯನ್ನು ಯಾವ ರೀತಿ ಆಚರಣೆ ಮಾಡಬೇಕು ಎಂಬ ಬಗ್ಗೆ ಒಮ್ಮತದ ತೀರ್ಮಾನ ಕೈಗೊಂಡು, ಜಿಲ್ಲಾಡಳಿತಕ್ಕೆ ತಿಳಿಸಿದರೆ ಅದೇ ರೀತಿ ಮಾಡೋಣ ಎಂದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಶೀಘ್ರದಲ್ಲೇ ಆಗಲಿದೆ. ಮುಖ್ಯಮಂತ್ರಿಗಳಿAದ ಉದ್ಘಾಟನೆ ಆಗಬೇಕು ಎಂಬ ನಿಮ್ಮ ಬೇಡಿಕೆಯಂತೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಮತ್ತೊಮ್ಮೆ ಚರ್ಚಿಸಿ ದಿನಾಂಕ ನಿಗದಿ ಪಡಿಸಿ ತಿಳಿಸಲಾಗುವುದು. ಏಪ್ರಿಲ್ 14 ರೊಳಗೆ ಪುತ್ಥಳಿ ಲೋಕಾರ್ಪಣೆಗೊಳಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಡಿವೈಎಸ್ಪಿ ಪಾಂಡುರAಗ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು