LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಗೆಲುವು: ಸಂಭ್ರಮಾಚರಣೆ

ಮಾಲೂರು: ಶಿಕ್ಷಕರು ಅಭಿಮಾನದಿಂದ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ವಿಧಾನಪರಿಷತ್ತಿನಲ್ಲಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಗ್ನೇಯ ವಿಧಾನಪರಿಷತ್ ಚುನಾವಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಡಿ.ಟಿ.ಶ್ರೀನಿವಾಸ್ ಅವರನ್ನು 3000 ಮತಗಳಿಗೂ ಹೆಚ್ಚಿನ ಅಂತರದಿಂದ ಗೆಲ್ಲಿಸಿದ್ದಾರೆ.

ಹೆಚ್ಚಿನ ಮತಗಳನ್ನು ನೀಡಿದ ತಾಲ್ಲೂಕಿನ ಶಿಕ್ಷಕರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ್ ಹೇಳಿದರು.
ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದ ಮುಖ್ಯ ರಸ್ತೆಯ ಮಾರಿಕಾಂಬಾ ದ್ವಾರದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ವೈ.ಎ ನಾರಾಯಣಸ್ವಾಮಿ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸದ ಕಾರಣದಿಂದ ನಾಲ್ಕನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ವೈ.ಎ.ನಾರಾಯಣಸ್ವಾಮಿ ಅವರನ್ನು ಶಿಕ್ಷಕರು ಸೋಲಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಮೇಲಿನ ಅಭಿಮಾನದಿಂದ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಡಿ.ಟಿ.ಶ್ರೀನಿವಾಸ ಅವರನ್ನು 3000ಕ್ಕೂ ಹೆಚ್ಚು ಎರಡನೇ ಪ್ರಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಶಿಕ್ಷಕರ ಕ್ಷೇತ್ರಕ್ಕೆ ಬೆಳಕಾಗಬೇಕು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಲಿದ್ದಾರೆ. ನೂತನವಾಗಿ ವಿಧಾನಪರಿಷತ್ತಿಗೆ ಆಯ್ಕೆಯಾದ ಡಿ.ಟಿ.ಶ್ರೀನಿವಾಸ್ ಹಾಗೂ ಹೆಚ್ಚಿನ ಮತಗಳನ್ನು ನೀಡಿ ಶ್ರೀನಿವಾಸ ಅವರ ಗೆಲುವಿಗೆ ಕಾರಣಕರ್ತರಾದ ಶಿಕ್ಷಕ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ವಿಜಯನರಸಿಂಹ ಮಾತನಾಡಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸದ ಬಿಜೆಪಿ ಪಕ್ಷದ ವೈ.ಎ.ನಾರಾಯಣಸ್ವಾಮಿ, ಅವರನ್ನು ಶಿಕ್ಷಕರು ತಿರಸ್ಕರಿಸಿ ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಸ್ಪರ್ಧಿಸಿದ್ದ ಐಎಎಸ್ ನಿವೃತ್ತ ಅಧಿಕಾರಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಿರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಮುಖ್ಯಮಂತ್ರಿಗಳು ಸಚಿವರ ಬಳಿ ಚರ್ಚಿಸಿ ಅನುಕೂಲ ಕಲ್ಪಿಸಲಿದ್ದಾರೆ.

ಡಿ.ಟಿ.ಶ್ರೀನಿವಾಸ್ ಅವರ ಪರವಾಗಿ ಶಾಸಕ ಕೆ.ವೈ.ನಂಜೇಗೌಡ ಅವರು ತಾಲೂಕಿನ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಣ ಕ್ಷೇತ್ರದ ಶಿಕ್ಷಕರ ಸಮಸ್ಯೆಗಳ ಸ್ಪಂದಿಸುವ ನಿಟ್ಟಿನಲ್ಲಿ ಡಿಟಿ ಶ್ರೀನಿವಾಸ್ ಅವರಿಗೆ ಮತಯಾಚನೆ ಮಾಡಿದ್ದರು ಅದರಂತೆ ತಾಲೂಕಿನ ಶಿಕ್ಷಕರು ಡಿ.ಟಿ ಶ್ರೀನಿವಾಸ್ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಅವರ ಗೆಲುವಿಗೆ ಸಹಕರಿಸಿದ್ದಾರೆ. ಹೆಚ್ಚಿನ ಮತಗಳನ್ನು ನೀಡಿದ ಶಿಕ್ಷಕರನ್ನು ಅಭಿನಂದಿಸುವದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯಾದವ ಸಂಘದ ಅಧ್ಯಕ್ಷ ಎ ಗೋವಿಂದಪ್ಪ, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಮಾದನಹಟ್ಟಿ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಇಂತಿಯಾಜ್ ಖಾನ್, ಜಾಕೀರ್ ಖಾನ್, ಮುರಳಿಧರ್, ಮಾಜಿ ಸದಸ್ಯ ಅಶ್ವಥರೆಡ್ಡಿ, ವಕೀಲ ರಮೇಶ್, ನವೀನ್, ಚಂದ್ರು, ಎಲ್.ಎ.ಶ್ರೀನಿವಾಸ್, ಇನ್ನಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು