LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಚಿಕ್ಕಬಳ್ಳಾಪುರ ಜಿಲ್ಲಾ ಬ್ರಾಹ್ಮಣರ ಸಂಘದಲ್ಲಿ ಶ್ರೀ ಶಂಕರಚಾರ್ಯರ ಜಯಂತಿ ಆಚರಣೆ

ಚಿಕ್ಕಬಳ್ಳಾಪುರ: ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವಿದೆ. ಅವರ ಸಾಧನೆಗಳು ಹಾಗೂ ವಿಚಾರ ದಾರೆಗಳು, ಸರ್ವಕಾಲಿಕವಾಗಿ ಜೀವಂತವಾಗಿರಲಿವೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮಂಗಳವಾರ ನಗರದ ನಗದಿ ಕೃಷ್ಣಪ್ಪ ವೇದ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಶ್ರೀ ಶಂಕರಾಚಾರ್ಯ ತಮ್ಮದೇ ಆದ ಅದ್ವೈತ ಸಿದ್ದಾಂತವನ್ನು ಭಾರತಾದ್ಯಂತ ಪ್ರಚುರ ಪಡಿಸುವ ಮೂಲಕ ಹಿಂದೂ ಧರ್ಮಕ್ಕೆ ನೀಡಿದ ಕೊಡುಗೆಯು ಅಪಾರವಾದುದು ಅವರು ಚಿಕ್ಕ ವಯಸ್ಸಿನಲ್ಲಿಯೇ 4 ವೇದಗಳನ್ನು ಅಧ್ಯಯನ ಮಾಡಿ ಎಲ್ಲಾ ಶಾಸ್ತ್ರಗಳಲ್ಲಿ ಜ್ಞಾನ ಪಡೆದಿದ್ದರು. ಬಜಗೋವಿಂದಂ, ವಿವೇಕ ಚೂಡಾಮಣಿ ಇನ್ನು ಮುಂತಾದ ಪುಸ್ತಕಗಳನ್ನು ರಚಿಸಿ ಮಹಾನ್ ತತ್ವಜ್ಞಾನವನ್ನು ಪ್ರಸಾರ ಮಾಡಿದ್ದಾರೆ. 8 ನೇ ಶತಮಾನದ ಅವರ ಕೊಡುಗೆಯನ್ನು 21 ನೇ ಶತಮಾನದಲ್ಲೂ ಸ್ಮರಿಸುವಂತಹ ಆದರ್ಶಗಳನ್ನು ನೀಡಿದ್ದಾರೆ ಎಂದರೆ ಅದಕ್ಕೆ ಅವರ ಬೋಧನೆಗಳ ಸತ್ವ ಎಂತದ್ದು ಎಂಬುದು ಗೊತ್ತಾಗಲಿದೆ ಎಂದು ಬಣ್ಣಿಸಿದರುಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ. ವೈ.ನವೀನ್ ಭಟ್ ಅವರು ಮಾತನಾಡಿ, ಶಂಕರಾಚಾರ್ಯರು ಭಕ್ತಿ ಮತ್ತು ಜ್ಞಾನ ಮಾರ್ಗಕ್ಕೆ ಹೆಚ್ಚು ಒತ್ತು ನೀಡಿದ್ದರು. ಜ್ಞಾನಕ್ಕಿಂತ ಮಿಗಿಲಾದದ್ದು ಜಗತ್ತಿನಲ್ಲಿ ಬೇರೊಂದಿಲ್ಲ. ಹಣಕ್ಕೆ ಹೆಚ್ಚು ಮಹತ್ವ ನೀಡಬಾರದು. ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಿದ ಮೇಲೆ ಮಿಗಿಲಾದ ಸಂಪತ್ತನ್ನು ಅಗತ್ಯ ಇರುವವರಿಗೆ, ಅಶಕ್ತರಿಗೆ ದಾನ ಮಾಡಿ ನೆಮ್ಮದಿ ಜೀವನ ಕಟ್ಟಿಕೊಳ್ಳಿ ಎಂದು ಸಾರಿದ ಅವರು ಭಾರತದಾದ್ಯಂತ ಸಂಚರಿಸಿ ಹಿಂದೂ ಧರ್ಮವನ್ನು ಪ್ರಚಾರ ಮಾಡಿದರು. ದೇಶದ ನಾಲ್ಕು ಭಾಗಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಶಂಕರಾಚಾರ್ಯರು ದೇಶದ ನಾಲ್ಕು ಭಾಗಗಳಲ್ಲಿ ಹಿಂದೂ ಧರ್ಮದ ಮಠಗಳನ್ನು ಸ್ಥಾಪಿಸಿದರು. ಅತ್ಯಂತ ಕಡಿಮೆ ಕಾಲಾವಧಿಯಲ್ಲಿ ಹೆಚ್ಚು ಸಾಧನೆ ಗೈದರು. ಹಿಂದೂ ಧರ್ಮ ಪುನರುಜ್ಜೀವನದಲ್ಲಿ ಪ್ರಮುಖಪಾತ್ರ ವಹಿಸಿ ಮಹಾನ್ ಸಾಧಕರಾಗಿದ್ದಾರೆ ಎಂದು ತಿಳಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತ ಪಾಠಶಾಲೆಯ ನಿವೃತ್ತ ಮುಖ್ಯೋಪಾದ್ಯಾಯರಾದ ಉಷಾದೇವಿ ಅವರು ಮಾತನಾಡುತ್ತಾ, ಭಾರತದಲ್ಲಿ ಹಿಂದೂ ಧರ್ಮದ ಜ್ಯೋತಿಯನ್ನು ನಿರಂತರವಾಗಿ ಬೆಳಗುವ ನಿಟ್ಟಿನಲ್ಲಿ ಜಾಗೃತಗೊಳಿಸುವ ಕೆಲಸವನ್ನು ಮಾಡಿದವರು ಜಗದ್ಗುರು ಆದಿ ಶಂಕಾರಾಚಾರ್ಯರು. ವಿವಿಧ ಜಾತಿ ವ್ಯವಸ್ಥೆಯಲ್ಲಿ ಸಿಲುಕಿ ನರಳುತ್ತಿದ್ದ ಸಮಾಜವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.ಹಿಂದೂಗಳನ್ನು ಒಗ್ಗೂಡಿಸಲು ಮತ್ತು ಹಿಂದುತ್ವದ ಅರಿವನ್ನು ಜನರಿಗೆ ಮೂಡಿಸುವ ಸಲುವಾಗಿ ಶಂಕರಾಚಾರ್ಯರು ಭಾರತದಾದ್ಯಂತ ಸಂಚರಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದರು. ಸನಾತನ ಧರ್ಮದ ಏಳ್ಗೆಗಾಗಿ ಶ್ರಮಿಸಿದ್ದಾರೆ.ಇಂದಿಗೂ ಸನಾತನ ಧರ್ಮವನ್ನು ಗುರುತಿಸಲಾಗುತ್ತಿದೆಯೆಂದರೆ ಅದಕ್ಕೆ ಶಂಕರಾಚಾರ್ಯರು ಕಾರಣ ಎಂದು ಬಣ್ಣಿಸಿದರು.ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ ಎಂ ರವಿಕುಮಾರ್, ಸಮುದಾಯದ ಮುಖಂಡರಾದ ಕೆ ನಾಗಭೂಷಣ್ ರಾವ್, ಪಿ .ಆರ್ ಪ್ರಕಾಶ್, ವೇಣುಗೋ ಪಾಲ್, ವೆಂಕಟೇಶ್ ಮೂರ್ತಿ, ರಮೇಶ್, ಡಿ.ಎಸ್, ರಮೇಶ್.ಸಿ.ಎ, ನಳಿನಕುಮಾರಿ, ಜಯ ಪ್ರಕಾಶ್, ಶೇಷಭಟ್, ಲಕ್ಷ್ಮೀನಾರಾಯಣ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು