LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜನಗಣತಿ-2027: ಎರಡು ಹಂತದಲ್ಲಿ ನಡೆಯಲಿದೆ ಗಣತಿ

ಬೆಂ.ಗ್ರಾ ಜಿಲ್ಲೆ, ದೇವನಹಳ್ಳಿ: ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದೆ. ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು ಏಪ್ರಿಲ್ 1, 2026 ರಿಂದ ಸೆಪ್ಟೆಂಬರ್ 30, 2026 ರವರೆಗೆ ನಡೆಯಲಿರುವ ಮೊದಲ ಹಂತದ ಮನೆಗಳ ಪಟ್ಟಿ ಮತ್ತು ವಸತಿ ಗಣತಿಯನ್ನು ಒಳಗೊಂಡಿದೆ. ಎರಡನೇ ಹಂತದ ಜನಸಂಖ್ಯಾ ಗಣತಿಯು ಫೆಬ್ರವರಿ 9, 2027ರಿಂದ ಫೆಬ್ರವರಿ 28, 2027ರವರೆಗೆ ನಡೆಯಲಿದೆ.
ಈ ಹಿಂದೆ 2011ರಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆದಿತ್ತು. ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಾಗಿತ್ತು. ಆದರೆ, ಕೋವಿಡ್ ಕಾರಣಕ್ಕೆ 10 ವರ್ಷಗಳಿಗೆ ಒಮ್ಮೆ ನಡೆಯಬೇಕಾದ ಜನಗಣತಿ ನಡೆದಿರಲಿಲ್ಲ. ಇದೀಗ 2026-27ನೇ ಸಾಲಿನಲ್ಲಿ ಜನಗಣತಿ ನಡೆಯುತ್ತಿದೆ.
ಮೊದಲ ಹಂತದಲ್ಲಿ ಏಪ್ರಿಲ್ 01 ರಿಂದ 15 ವರೆಗೆ ಸಾರ್ವಜನಿಕರು ಜನಗಣತಿ ಆ?ಯಪ್ ಅಥವಾ ಪೋರ್ಟಲ್ ಮೂಲಕ ಸ್ವಯಂ ಮಾಹಿತಿ ದಾಖಲಿಸಿಕೊಳ್ಳಬಹುದು. ನಂತರ ಏಪ್ರಿಲ್ 16 ರಿಂದ ಮೇ 16 ರವರೆಗೆ ಗಣತಿದೋರರು ಮನೆಪಟ್ಟಿ, ಮನೆ ಗಣತಿ ಕ್ಷೇತ್ರ ಕಾರ್ಯ ಮಾಡಲಿದ್ದಾರೆ. ಗಣತಿದಾರರ ಸ್ಮಾರ್ಟ್ ಫೋನ್ ಮೀಸಲಾದ ಮೊಬೈಲ್ ಆಪ್ ಮೂಲಕ ಆನ್ಲೆöÊನ್ನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆನ್ಲೈನಲ್ಲಿಯೂ ಈ ಆಪ್ ಕೆಲಸ ಮಾಡಲಿದ್ದು, ನೆಟ್ವರ್ಕ್ ವ್ಯಾಪ್ತಿಗೆ ಬಂದಾಗ ಸಂಗ್ರಹಿಸಿದ ಮಾಹಿತಿಗಳು ಸರ್ವ್ರಗೆ ಸಂಯೋಜನೆ ಆಗಲಿವೆ. ಗಣತಿ ಪ್ರಕ್ರಿಯೆಯನ್ನು ಆರಂಭದಿAದ ಮುಕ್ತಾಯದವರೆಗೆ ನಿರ್ವಹಿಸಲು ‘ಜನಗಣತಿ ನಿರ್ವಹಣೆ ಮತ್ತು ಮಾನಿಟರಿಂಗ್ ಸಿಸ್ಟಂ’ (ಸಿಎಂಎಂಎಸ್) ಎಂಬ ವಿಶೇಷ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ.
ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗಿದ್ದು,150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗೆ ಓರ್ವ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ.
ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಧಾನ ಜನಗಣತಿ ಅಧಿಕಾರಿಗಳಾಗಿದ್ದು, ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಜಿಪಂ ಮುಖ್ಯ ಯೋಜನಾಧಿಕಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು,ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಹಂತದ ಚಾರ್ಜ್ ಅಧಿಕಾರಿಗಳಾಗಿ, ಗ್ರಾಮೀಣ ಪ್ರದೇಶದ ಚಾರ್ಜ್ ಅಧಿಕಾರಿಗಳಾಗಿ ತಹಶೀಲ್ದಾರರು,ನಗರ ಪ್ರದೇಶಕ್ಕೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಚಾರ್ಜ್ ಅಧಿಕಾರಿಗಳಾಗಿರುತ್ತಾರೆ.
*ಮೊದಲ ಹಂತದಲ್ಲಿ ಮನೆ ಗಣತಿ* ‘ಮೊದಲ ಹಂತದಲ್ಲಿ ಮನೆ ಗಣತಿ ಮಾತ್ರ ನಡೆಯಲಿದ್ದು, ಕ್ಷೇತ್ರ ಮಟ್ಟದ ಗಣತಿದಾರರು ಎಚ್‌ಎಲ್ಬಿ (ಹೌಸ್ ಲಿಸ್ಟಿಂಗ್ ಬ್ಲಾಕ್) ಕ್ರಿಯೇಟರ್ ಆಪ್ ಬಳಸಿ ಪ್ರತಿ ಬ್ಲಾಕ್ನ ಮನೆಗಳ ಲೊಕೇಶನ್ ಮತ್ತು ವ್ಯಾಪ್ತಿಯನ್ನು ಜಿಯೋ ಟ್ಯಾಗಿಂಗ್ ಮೂಲಕ ಗುರುತಿಸಲಿದ್ದಾರೆ. ಮೊದಲ ಹಂತದಲ್ಲಿ 33 ಪ್ರಶ್ನೆ ಒಳಗೊಂಡಿದ್ದು ಮನೆಗಳ ಸಂಖ್ಯೆ, ಗೋಡೆ, ಛಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಮತ್ತು ಮನೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.
*ಎರಡನೇ ಹಂತ ಜನಸಂಖ್ಯಾ ಗಣತಿ* ಎರಡನೇ ಹಂತದಲ್ಲಿ ಪ್ರತಿ ವ್ಯಕ್ತಿಯ ವಯಸ್ಸು, ಲಿಂಗ, ಶಿಕ್ಷಣ, ಉದ್ಯೋಗ, ಧರ್ಮ ಮತ್ತು ಭಾಷೆಯಂತಹ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು