LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕೇಂದ್ರಕ್ಕೆ ದುರುದ್ದೇಶ ಇಲ್ಲ ಗಣರಾಜ್ಯೋತ್ಸವ ರಾಜ್ಯದ ಸ್ತಬ್ಧ ಚಿತ್ರದ ಬಗ್ಗೆ ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ಈ ನಾಡಿನ ನೆಲ, ಜಲ, ಸಂಪತ್ತಿನ ಬಗ್ಗೆ ನೈಜ ಕಾಳಜಿ ಇದ್ದರೆ ಬೆಳಗಾವಿ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ವಿಷಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ನಗರದ ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಇಂದು ನಡೆದ ಬಿಜೆಪಿ ಲೋಕಸಭೆ ಕ್ಷೇತ್ರವಾರು ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಕಳೆದ ಆರು ತಿಂಗಳಿಂದ ಹರಿಸುತ್ತಿದ್ದು ಅದರ ವಿಷಯದಲ್ಲೂ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.

ದೆಹಲಿ ಗಣರಾಜ್ಯೋತ್ಸವ ಪರೇಡ್ ವೇಳೆ ಸ್ತಬ್ಧಚಿತ್ರ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ 14 ವರ್ಷಗಳಿಂದ ಅವಕಾಶ ಸಿಕ್ಕಿದೆ.
ಈಗ ಕೊಡುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿಲ್ಲ. ಕಳೆದ ವರ್ಷ ಕೂಡ ಕರ್ನಾಟಕಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಹೇಳಿದಾಗ ರಾಜ್ಯದ ನಮ್ಮೆಲ್ಲ ಹಿರಿಯರು ಪ್ರಯತ್ನಿಸಿದಾಗ ಅವಕಾಶ ಲಭಿಸಿತ್ತು.

ಈ ಬಾರಿ ಕರ್ನಾಟಕ, ಗೋವಾ ಸೇರಿ ನಾಲ್ಕೈದು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ. ಕರ್ನಾಟಕಕ್ಕೆ ಅವಕಾಶ ಕೊಡಬಾರದೆಂಬ ದುರುದ್ದೇಶ ಇದರಲ್ಲಿ ಇಲ್ಲ. ಬೇರೆ ರಾಜ್ಯಕ್ಕೂ ಅವಕಾಶ ಕೊಡಬೇಕೆಂಬ ಸದುದ್ದೇಶವಿದೆ ಅಷ್ಟೇ ಎಂದು ನುಡಿದರು.ಅವಕಾಶ ಸಿಗದ ಕರ್ನಾಟಕ ಮತ್ತಿತರ ರಾಜ್ಯಗಳಿಗೆ ಎಕ್ಸಿಬಿಷನ್‍ನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ.

ಇದನ್ನು ಗಮನಿಸದೆ ಈನಾಡಿನ ಬಗ್ಗೆ ಮೊಸಳೆಕಣ್ಣೀರು ಹಾಕುವಕೆಲಸ ರಾಜ್ಯ ಕಾಂಗ್ರೆಸ್ ಸರಕಾರದ್ದು ಎಂದು ಟೀಕಿಸಿದರು.
ಕನ್ನಡಪರ ಹೋರಾಟಗಾರ ನಾರಾಯಣಗೌಡರ ಕುರಿತ ಸರಕಾರದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ನಿನ್ನೆ ಬಿಡುಗಡೆ ಆದೊಡನೆ ಮತ್ತೊಂದು ಕೇಸಿನಲ್ಲಿ ಒಳಗಡೆ ಹಾಕುವ ಪಿತೂರಿ ರಾಜ್ಯ ಸರಕಾರದ್ದು ಎಂದು ಆಕ್ಷೇಪಿಸಿದರು.

ಮೊಸಳೆ ಕಣ್ಣೀರು ಹಾಕುವುದನ್ನು ಬಿಡಿ. ಪ್ರಾಮಾಣಿಕವಾಗಿ ಎಲ್ಲ ವಿಷಯದಲ್ಲೂ ರಾಜ್ಯದ ಪರವಾಗಿ ನಿಲ್ಲಿ ಎಂದು ಅವರು ಸರಕಾರಕ್ಕೆ ಆಗ್ರಹಿಸಿದರು.ಎಲ್ಲ ವಿಷಯದಲ್ಲೂ ಕೇಂದ್ರ ಸರಕಾರ ರಾಜ್ಯದ ವಿರುದ್ಧ ಇದೆ ಎಂದು ಮುಖ್ಯಮಂತ್ರಿಗಳು ಬಿಂಬಿಸುತ್ತಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದರು. ಬೇರೆ ಬೇರೆ ವಿಷಯಗಳಲ್ಲಿ ನಿಮ್ಮ ನಡವಳಿಕೆಯನ್ನು ಜನತೆ ಗಮನಿಸುತ್ತಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು