ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ಎಂಬ ವಿಷಯಕ್ಕೆ ಸಂಬAಧಪಟ್ಟAತೆ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಲು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ದೆಹಲಿಗೆ ತೆರಳಿದ್ದಾರೆ.
ಸಾಂವಿಧಾನಿಕ ಹುದ್ದೆಯಾಗಿರುವ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ಅವರು ನಿಯಮಾವಳಿಯಂತೆ ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ಕೆಳಗಿಳಿಸಿ ಅವರ ಸ್ಥಾನಕ್ಕೆ ತಮ್ಮ ಪಕ್ಷದವರನ್ನು ನೇಮಿಸಲು ಮುಂದಾಗಿರುವ ಕ್ರಮದ ವಿರುದ್ಧ ಹೊರಟ್ಟಿ ಈಗಾಗಲೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಬಗ್ಗೆ ಸಮಾಲೋಚನೆ ನಡೆಸಲು ತಮ್ಮ ಎನ್‌ಡಿಎ ಮೈತ್ರಿಕೂಟದ ಪಕ್ಷವಾಗಿರುವ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಅಶೋಕ್ ಅವರನ್ನು ದೆಹಲಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಜೆಡಿಎಸ್ ಹೋರಾಟದ ಜತೆ ಬಿಜೆಪಿಯೂ ಕೈಜೋಡಿಸಿ ಹೋರಾಟ ನಡೆಸಲು ಮುಂದಾಗಿದ್ದು, ಈ ಬಗ್ಗೆ ಆ.9ರಿಂದ 11ರವರೆಗೆ ಜೆಡಿಎಸ್ ಪಾದಯಾತ್ರೆಗಳಲ್ಲಿ ಭಾಗವಹಿಸಲು ಜೆಡಿಎಸ್ ಬಿಜೆಪಿ ಹೋರಾಟದ ಬಗ್ಗೆಯೂ ಚರ್ಚಿಸಲು ಅಶೋಕ್ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.