LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕುಲಪತಿ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ . ಎಂ.ಆರ್. ಗಂಗಾಧರ್ ಅವರು ಸಲಹೆ ಮಾಡಿದರು.

ಚಾಮರಾಜನಗರ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿ ನೆಹರು ಯುವ ಕೇಂದ್ರ, ಚಾಮರಾಜನಗರ ವಿಶ್ವವಿದ್ಯಾನಿಲಯ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ 161ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಭಾಗವಹಿಸುವಿಕೆ ದಿನದ ಪ್ರಯುಕ್ತ ಏರ್ಪಡಿಸಿದ್ದ ಚೀಟಿ ನೋಡಿ ಮಾತನಾಡುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಸ್ಪರ್ಧೆ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಹೆಚ್ಚಾಗಿ ಬಳಸುತ್ತಿದ್ದಾರೆ. ವ್ಯಾಸಂಗದ ಕಡೆ ಹೆಚ್ಚು ಕೇಂದ್ರೀಕರಿಸಬೇಕು. ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಪರಿಶ್ರಮದಿಂದ ಅಧ್ಯಯನ ಮಾಡಬೇಕು ಎಂದು ಪ್ರೊ. ಎಂ.ಆರ್. ಗಂಗಾಧರ್ ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ ಅವರು ಮಾತನಾಡಿ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಯುವ ವಿದ್ಯಾರ್ಥಿಗಳು ಪಾಲಿಸಬೇಕು. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸಂದೇಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಬರಬೇಕು ಎಂದು ಸಲಹೆ ನೀಡಿದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಚಾಮರಾಜನಗರ ವಿ.ವಿ ಮೌಲ್ಯಮಾಪನ ಕುಲಸಚಿವರಾದ ಪ್ರೊ . ಪಿ. ಮಾದೇಶ್ ಅವರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಸಾಂಸ್ಕøತಿಕ ಸೇವಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು. ತಾಳ್ಮೆ, ಶಿಸ್ತು, ಸಮಯಪ್ರಜ್ಞೆ ವಿದ್ಯಾರ್ಥಿಗಳಿಗೆ ಅಗತ್ಯ ಎಂದರು.

ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ ಬಂಗಾರು. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಿದರು.
ಉಪನ್ಯಾಸಕರಾದ ಡಾ. ಎಂ. ಮಾದೇವಮೂರ್ತಿ, ಮೂಕಳ್ಳಿ ಬಸವಣ್ಣ, ನೆಹರು ಯುವ ಕೇಂದ್ರದ ಸಹನ, ಶಂಕರ, ಸಮಾಜ ಸೇವಕರಾದ ಕಾರ್ತಿಕ್ ನಾಯಕ್, ಮಹೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು