LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬದಲಾವಣೆ ಗ್ಯಾರಂಟಿ ಹೆಬ್ಬಾಳ್ಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂ.61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು.ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು.

ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ. ಅರಭಾವಿ, ಗೋಕಾಕ್, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು) ಆಶೀರ್ವಾದವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕುಟುಂಬ ಸಮೇತ ಬಂದು ಮತಹಾಕಿರುವೆ. ಪ್ರತಿಯೊಬ್ಬರೂ ಬಂದು ಮತ ಹಾಕಬೇಕು. ಈ ಬಾರಿ ನೂರಕ್ಕೆ ನೂರರಷ್ಟು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಹೇಳಿದರು.ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ. ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ. ಚಿಕ್ಕೋಡಿ, ಬೆಳಗಾವಿ ಎರಡು ಕ್ಷೇತ್ರ ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ದಾಖಲಿಸಲಿದ್ದು, ಬೆಳಗಾವಿ ಸ್ವಾಭಿಮಾನಕ್ಕೆ ಗೆಲುವು ಸಿಗಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು