LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

" ಟ್ರೇಲರ್‌ ನಲ್ಲೇ ಕುತೂಹಲ ಮೂಡಿಸಿದೆ ಚತುಷ್ಪಥ "

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ " ಚತುಷ್ಪಥ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ವಿಭಿನ್ನ ಕಂಟೆAಟ್ ವುಳ್ಳ ಈ ಚಿತ್ರ ಟ್ರೇಲರ್ ನಲ್ಲೇ ನೋಡುಗರ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

"ಚತುಷ್ಪಥ" ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನಾವು ಇದನ್ನು ನೋಡಬಹುದು. ಆದರೆ ನಮ್ಮ ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಈ ನಾಲ್ಕು ಅಂಶಗಳನಿಟ್ಟುಕೊAಡು ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ
ನಾಲ್ಕು ಜನರ ದಾರಿ ಬೇರೆಯೇ ಆಗಿರುತ್ತದೆ. ಆ ದಾರಿಗಳು ಎಲ್ಲಿ ತಲುಪತ್ತದೆ. ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ವಿಭಿನ್ನ ಕಂಟೆAಟ್ ಹೊಂದಿರುವ ನಮ್ಮ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ನಿಮ್ಮ ಮುಂದೆ ಬರಲಿದೆ. "ಚತುಷ್ಪಥ" ನನ್ನ ಚೊಚ್ಚಲ ನಿರ್ದೇಶನದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಕೃಷ್ಣೋಜಿ ರಾವ್ ತಿಳಿಸಿದರು.

ನಿರ್ದೇಶಕರು ನನಗೆ ಕಥೆ ಹೇಳಿದಾಗ ನನ್ನ ಪಾತ್ರದ ಬಗ್ಗೆ ಕೇಳಿ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ನಾಲ್ಕು ಜನರ ದಾರಿ ನಾಲ್ಕು ಕಡೆ ಹೋಗಿ ಮುಟ್ಟುತ್ತದೆ. ಅದರಲ್ಲಿ ನನ್ನದು ಒಂದು ದಾರಿ. ಈ ನಾಲ್ಕು ದಾರಿ ಎಲ್ಲಿ ಹೋಗಿ ಮುಟ್ಟುತ್ತದೆ ಎನ್ನುವುದೆ "ಚತುಷ್ಪಥ". ಎಂದು ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟ ಜಗನ್ ತಿಳಿಸಿದರು. ಚಿತ್ರದಲ್ಲಿ ಎರಡು ಹಾಡುಗಳು ಹಾಗೂ ಒಂದು ಬಿಟ್ ಇದೆ. ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ವಿಜಯ್  ಪ್ರಕಾಶ್ ಸೇರಿದಂತೆ ಹೆಸರಾಂತ ಗಾಯಕರು ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವೀರ ಸಮರ್ಥ್ ತಿಳಿಸಿದರು.

ನಟಿ ಶಿಲ್ಪ, ನಟ ಸುಂದರ್, ನಟಿ ಸವಿತ, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಹಾಗೂ ಛಾಯಾಗ್ರಾಹಕ ಉದಯ್ ಬಲ್ಲಾಳ್ ಅವರು ಸಹ "ಚತುಷ್ಪಥ" ಚಿತ್ರದ ಬಗ್ಗೆ ಮಾತನಾಡಿದರು. ಜಗನ್, ಕಿರಣ್ ರಾಜ್, ಮಿಲನ ನಾಗರಾಜ್, ಶಿಲ್ಪ, ಹನುಮಂತೇ ಗೌಡ, ಶ್ರೀಧರ್, ಸುಂದರ್, ಆಕರ್ಶ್, ತರಂಗ ವಿಶ್ವ, ಸವಿತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು