LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿ: ಶಿವಶಂಕರ್

ದೇವನಹಳ್ಳಿ: ಜಿಲ್ಲೆಯಲ್ಲಿರುವ ಆಹಾರ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿ ಎಂದು ಆಹಾರ ಸುರಕ್ಷತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸೂಚಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ, ಶಾಲೆಗಳಿಗೆ, ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ತಯಾರಿಸುವ ಆಹಾರದ ಬಗ್ಗೆ ಪರಿಶೀಲನೆ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆಹಾರ ಉದ್ದಿಮೆದಾರರು ಆಹಾರ ನೋಂದಣಿ ಅಥವ ಆಹಾರ ಪರವಾನಿಗೆ ಪಡೆಯುವುದು ಕಡ್ಡಾಯ , ಪರವಾನಗಿ ಪಡೆಯದೇ ನಡೆಸುವ ಆಹಾರ ಉದ್ದಿಮೆಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಿ, ನಿಯಮಿತವಾಗಿ ಸಂಶಯಾಸ್ಪದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದು ಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ ಜಿಲ್ಲೆಯಲ್ಲಿ 5548 ನೋಂದಣಿ ಹಾಗೂ 1505 ಪರವಾನಿಗೆ ಪಡೆದ ಆಹಾರ ಉದ್ದಿಮೆಗಳು ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
ದೂರು ನೀಡಿ: ಜಿಲ್ಲೆಯ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮೊಬೈಲ್ ಸಂಖ್ಯೆ 9901961771,

ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು ಮೊಬೈಲ್ ಸಂಖ್ಯೆ 9845511663, ದೊಡ್ಡಬಳ್ಳಾಪುರ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್ ಮೊಬೈಲ್ ಸಂಖ್ಯೆ 9731837210, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್ ಮೊಬೈಲ್ ಸಂಖ್ಯೆ 8884393910, ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ರವಿಕುಮಾರ್ ಮೊಬೈಲ್ ಸಂಖ್ಯೆ 9845580486 ಇವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರವೀಣ್, ಜಿಲ್ಲಾಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ
ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು