LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸಂಜು ಸ್ಯಾಮ್ಸನ್ ಅನ್ನು ಕ್ಯಾಚ್ ಹಾಕ್ಕೊಳ್ಳುತ್ತಾ ಚೆನ್ನೈಸೂಪರ್ ಕಿಂಗ್ಸ್?

ಐಪಿಎಲ್ ೨೦೨೬ರ ಹರಾಜು ಪ್ರಕ್ರಿಯೆಗೆ ಆಟಗಾರರ ಉಳಿಕೆ (Retention) ಗಡುವು ಸಹ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಪ್ರಮುಖ ಆಟಗಾರರ ವರ್ಗಾವಣೆ ಬಗ್ಗೆ ಕಳೆದ ಕೆಲವು
ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಟ್ರೇಡ್ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಿದೆ ಎಂಬ ಮಾತು ಕಳೆದ ಕೆಲ ತಿಂಗಳಿಂದ ಕೇಳಿ ಬರುತ್ತಿದ್ದು ಈ ಸಂದರ್ಭದಲ್ಲಿ ಅದು ಮತ್ತಷ್ಟು ಹೆಚ್ಚಾಗಿದೆ. ಇದೀಗ
ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ತನ್ನ ಸಿಇಒ ಕಾಸಿ ವಿಶ್ವನಾಥನ್ ಮತ್ತು ತಂಡದ ಮ್ಯಾಸ್ಕಾಟ್ 'ಲಿಯೋ' ಒಳಗೊಂಡ ಒಂದು ಹಾಸ್ಯಮಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.

೨೦೧೮ ರಿಂದ ರಾಜಸ್ಥಾನ ರಾಯಲ್ಸ್ ತಂಡದ ಭಾಗವಾಗಿ ಸಂಜು ಸ್ಯಾಮ್ಸನ್ ಅವರು ೨೦೨೧ ರಿಂದ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಅವರು ಹೊಸ ತಂಡಕ್ಕೆ ಸೇರಲು ಪ್ರಯತ್ನಿಸುತ್ತಿದ್ದು ಚೆನ್ನೈ ಸೂಪರ್ ಕಿಂಗ್ಸ್ ಅವರನ್ನು ಖರೀದಿಸಲು ಉತ್ಸುಕವಾಗಿದೆ. ಹೀಗಾಗಿ ಟ್ರೇಡ್ ಗಾಗಿ ಸಿಎಸ್ ಕೆಯು ರಾಜಸ್ಥಾನ ರಾಯಲ್ಸ್ ತಂಡದೊಂದಿಗೆ ಮಾತುಕತೆಗಳನ್ನು ಆರಂಭಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ವರದಿಗಳ ಪ್ರಕಾರ, ರಾಜಸ್ಥಾನ ರಾಯಲ್ಸ್ ತಂಡವು ಸಂಜು ಸ್ಯಾಮ್ಸನ್ ಅವರ ಬದಲಿಗೆ ರವೀಂದ್ರ ಜಡೇಜಾ ಅಥವಾ ಋತುರಾಜ್ ಗಾಯಕ್ವಾಡ್ ಅವರಂತಹ ಪ್ರಮುಖ CSK ಆಟಗಾರರನ್ನು ನೀಡುವಂತೆ ಕೇಳಿತ್ತು. ಆದರೆ, CSK ತಂಡವು ತಮ್ಮ ತಂಡದ ಪ್ರಮುಖ ಆಟಗಾರರನ್ನು ಬಿಟ್ಟುಕೊಡಲು
ಹಿಂಜರಿಯುತ್ತಿರುವುದರಿಂದ ಈ ಪ್ರಕ್ರಿಯೆ ನಿಧಾನವಾಗುತ್ತಿದೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಿಎಸ್ ಕೆ ತಂಡವು ಈ ವದಂತಿಗಳಿಗೆ ಸ್ಪಷ್ಟನೆ ನೀಡಿದೆ. ಸಿಇಒ ಕಾಸಿ ವಿಶ್ವನಾಥನ್ ಅವರು ಈ ಸಾಮಾಜಿಕ ಜಾಲತಾಣದ ವದಂತಿಯ ಬಗ್ಗೆ ಹಾಸ್ಯಮಯವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋದಲ್ಲಿ, ಸಂಜು ಸ್ಯಾಮ್ಸನ್ ಅವರ ವರ್ಗಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಉಲ್ಲೇಖಿಸುವ ತಮಿಳು- ಮಲಯಾಳಂ ಹಾಡಿನ ಸಾಲುಗಳಿವೆ. ಅಂತಿಮವಾಗಿ, ಕಾಸಿ ವಿಶ್ವನಾಥನ್ ಅವರು ಅಭಿಮಾನಿಗಳಿಗೆ ಮತ್ತು ತಂಡದ ಅನುಯಾಯಿಗಳಿಗೆ ಯಾವುದೇ ವರ್ಗಾವಣೆ ಒಪ್ಪಂದಗಳು CSK ಯಿಂದ ಅಧಿಕೃತವಾಗಿ ಘೋಷಣೆಯಾಗುವವರೆಗೆ ಅಂತಹ ವದಂತಿಗಳನ್ನು ನಂಬದಂತೆ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು