LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸ್ವತಂತ್ರರಾದರೂ ಅತಂತ್ರರಾಗಿಯೇ ಇದ್ದೇವೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಭಾರತ ದೇಶವು ಗಾಂಧೀಜಿಯವರ ಆದಿಯಾಗಿ ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ÷್ಯವನ್ನು ಪಡೆದರೂ ಸಹ ಇಂದಿಗೂ ಭ್ರಷ್ಟ ರಾಜಕಾರಣಿಗಳಿಂದ ಅತಂತ್ರರಾಗಿಯೇ ಉಳಿದಿದ್ದೇವೆ. ಪ್ರಾಮಾಣಿಕ ರಾಜಕಾರಣದಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಭ್ರಷ್ಟಮುಕ್ತ, ಪಾರದರ್ಶಕ, ವಂಶ ಪಾರಂಪರ್ಯ ರಾಜಕಾರಣವನ್ನು ಹೊಡೆದೋಡಿಸಲು ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿಯ ಚಂದ್ರು ಪಕ್ಷವು ಏರ್ಪಡಿಸಿದ್ದ “ ಜಿಬಿಎ ಚುನಾವಣೆಯಲ್ಲಿ ವಕೀಲರುಗಳ ಪಾತ್ರ “ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶದಲ್ಲಿ ಪರ್ಯಾಯ ರಾಜಕಾರಣ ವ್ಯವಸ್ಥೆಯನ್ನು ತರಲೇಬೇಕೆಂಬ ಮಹಾದಾಶೆಯಿಂದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ ಮುಂಬರುವ ಎಲ್ಲಾ ನಗರ ಪಾಲಿಕೆಗಳ ಚುನಾವಣೆಗಳಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಿ, ಬೆಂಬಲಿಗರಾಗಿ, ಪೋಷಕರಾಗಿ ಕೈಜೋಡಿಸಬೇಕು. ಕಳೆದ ಹಲವು ದಶಕಗಳಿಂದ ಸಂಪೂರ್ಣ ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬೆಂಗಳೂರಿನ ಮಹಾನಗರ ಪಾಲಿಕೆಯು ನಾಗರಿಕರಿಗೆ ಬದುಕಲು ಸಾಧ್ಯವೇ ಆಗದಂತಹ ಪರಿಸ್ಥಿತಿಗೆ ತಳ್ಳಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಸಂಪೂರ್ಣ ವೈಫಲ್ಯಗೊಂಡು ಬೆಂಗಳೂರಿಗರು ಪ್ರಾಣವನ್ನೇ ಒತ್ತೆ ಇಟ್ಟು ಬದುಕುವಂತಹ ಪರಿಸ್ಥಿತಿಗೆ ತಲುಪಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಕೀಲರುಗಳೆಲ್ಲರೂ ಪ್ರಾಮಾಣಿಕ ಪಕ್ಷಗಳಲ್ಲಿ ಗುರುತಿಸಿಕೊಂಡು ಭ್ರಷ್ಟ ವ್ಯವಸ್ಥೆಯನ್ನು ಸರಿ ಮಾಡಬೇಕೆಂದು “ ಮನವಿ ಮಾಡಿದರು.
ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ವಕೀಲ ಲಕ್ಷಿ÷್ಮಕಾಂತರಾವ್ ಮಾತನಾಡಿ “ ಬೆಂಗಳೂರಿನ ವಕೀಲ ವರ್ಗ ಸದಾಕಾಲ ಭ್ರಷ್ಟರುಗಳೊಂದಿಗೆ ಕೋರ್ಟುಗಳಲ್ಲಿ ಸೆಣಸುತ್ತಾ ಬಂದಿದ್ದಾರೆ. ಇದೀಗ ಚುನಾವಣೆ ಕಣದಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಅಧಿಕಾರದ ಚುಕ್ಕಾಣಿಯನ್ನು ಹಿಡಿದು ಜನಸೇವೆಗೆ ಮುಂದಾಗಬೇಕೆಂದು “ ಕರೆ ನೀಡಿದರು. ಸಂವಾದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ, ಹಿರಿಯ ಮುಖಂಡರುಗಳು ಹಾಗು ವಕೀಲರುಗಳಾದ ನಂಜಪ್ಪ ಕಾಳೇಗೌಡ, ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಕುಮಾರ್, ಮಹದೇವಸ್ವಾಮಿ, ಬಸವರಾಜ ಮುದಿಗೌಡರ್, ರವಿಕುಮಾರ್, ಉಷಾ ಮೋಹನ್, ಜ್ಯೋತಿಶ್ ಸೇರಿದಂತೆ ಅನೇಕ ಮುಖಂಡರುಗಳು ಕಾರ್ಯಕರ್ತರಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು