LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸೂಟ್‍ಕೇಸ್‍ನಲ್ಲಿ ಮಗು ಶವ: ತಾಯಿ ಬಂಧನ

ಚಿತ್ರದುರ್ಗ: ಗೋವಾದ ಹೋಟೆಲ್‍ವೊಂದರಲ್ಲಿ ಸ್ವತಃ ತನ್ನ ಮಗುವನ್ನೇ ಹತ್ಯೆ ಮಾಡಿ ಸೂಟ್‍ಕೇಸ್‍ನಲ್ಲಿಟ್ಟು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುವ ವೇಳೆ ಆರೋಪಿ ಮಹಿಳೆ ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.

ಗೋವಾದ ಹೋಟೆಲ್‍ವೊಂದರಲ್ಲಿ ತಂಗಿದ್ದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ಎಂಬಾಕೆ ಮಗುವನ್ನು ಹೋಟೆಲ್‍ನಲ್ಲಿಯೇ ಹತ್ಯೆ ಮಾಡಿ ಸೂಟ್‍ಕೇಸ್‍ನಲ್ಲಿಟ್ಟು ಬೆಂಗಳೂರಿಗೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಹೋಟೆಲ್‍ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಹೋಟೆಲ್ ಸಿಬ್ಬಂದಿ ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ.

ಆಗ ಸುಚನಾ ಅವರು ಸಂಬಂಧಿಕರ ಮನೆಗೆ ಕಳಿಸಿದ್ದೇನೆಂದು ಸುಳ್ಳು ಹೇಳಿ ಟ್ಯಾಕ್ಸಿ ಮೂಲಕ ಬೆಂಗಳೂರಿನತ್ತ ತೆರಳಿದ್ದಾರೆ. ಈ ವೇಳೆ ಅನುಮಾನಗೊಂಡ ಹೋಟೆಲ್‍ನವರು ರೂಮ್ ಸ್ವಚ್ಛಗೊಳಿಸಲು ಹೋಗಿದ್ದು ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಟ್ಯಾಕ್ಸಿ ಚಾಲಕನ ಮೊಬೈಲ್ ನಂ ಪತ್ತೆ ಹಚ್ಚಿ ಆತನಿಗೆ ಕರೆ ಮಾಡಿ ಕಾರನ್ನು ಹೆದ್ದಾರಿಯಲ್ಲಿ ಸಿಗುವ ಪೊಲೀಸ್ ಠಾಣೆ ಮುಂದೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.ಪೊಲೀಸರ ಸೂಚನೆಯಂತೆ ಟ್ಯಾಕ್ಸಿ ಚಾಲಕ ಐಮಂಗಲ ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದಾಗ ಕೂಡಲೇ ಪೊಲೀಸರು ಕಾರನ್ನು ತಪಾಸಣೆ ಮಾಡಿದಾಗ ಸೂಟ್‍ಕೇಸ್‍ನಲ್ಲಿ ಮಗುವಿನ ಶವಇರುವುದು ಪತ್ತೆಯಾಗಿದೆ.

ತಕ್ಷಣ ಸುಚನಾಸೇಠ್ ಅವರನ್ನು ವಶಕ್ಕೆ ಪಡೆದು ಮಗುವನ್ನು ಶವಗಾರಕ್ಕೆ ಸಾಗಿಸಿದ್ದಾರೆ. ತಾಯಿಯೇ ಮಗು ಕೊಲೆ ಮಾಡಲು ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು