ಬೆಂಗಳೂರು: ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು, ಶಾಲಾ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದರೆ ಮತ್ತೊಂದೆಡೆ ಮುಖ್ಯಮಂತ್ರಿ ಮತ್ತು ಸಚಿವರು ಜೆಟ್ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ವೈಭೋಗದಿಂದ ಇದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿಜೆಪಿಯ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
Also read
ದೆಹಲಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಕೆಲವರು ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವುದಕ್ಕೆ ಅಸಮಾಧಾನ ಹೊರ ಹಾಕಿರುವ ಅಶೋಕ್ ಇಂತಹ ದೌಲತ್ತು ಇವರಿಗೆ ಬೇಕಾಗಿತ್ತೆ ಎಂದು ಕಿಡಿಕಾರಿದ್ದಾರೆ.