LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಚೋಮನದುಡಿ ರೂಪಾಂತರ"

ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಶಿವರಾಮಕಾರಂತರ ಕೃತಿ `ಚೋಮನದುಡಿ' ಚಿತ್ರವಾಗಿ ಮೂಡಿಬಂದು ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿತ್ತು. ಕಟ್ ಮಾಡಿದರೆ ಬರೋಬ್ಬರಿ ಐವತ್ತು ವರ್ಷಗಳ ನಂತರ ಇದೇ ಸಿನಿಮಾ ನೆನಪಿಸುವ ಬಿಚ್ಚುಗತ್ತಿಯ ಬಂಟನ ಬಲ್ಲರೇನ ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ. `ದುಡಿಯ ಸದ್ದಿಗೆ ಕ್ರಾಂತಿಯ ಎದ್ದಿದೆ'
ಎಂಬ ತೂಕದ ಅಡಿಬರಹ ಇರಲಿದೆ. ದೋರಸಮುದ್ರ ಪಿಕ್ಚರಸ್ ಬ್ಯಾನರ್ ಅಡಿಯಲ್ಲಿ ಅನಿಲ್ ದೋರಸಮುದ್ರ ನಿರ್ದೇಶನ ಹಾಗೂ ಬಂಡವಾಳ ಹೂಡಿದ್ದಾರೆ. ಸಹೋದರ ನವೀನ್ ಸಿಂಬಾವಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. `ಚೋಮನದುಡಿ' ಚಿತ್ರದಲ್ಲಿ ಅಭಿನಯಿಸಿದ್ದ ಹಿರಿಯನಟ ಸುಂದರ್‌ರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಕಾಳನಾಗಿ ಚೆಲುವರಾಜ್‌ಗೌಡ, ಬಾಸುಮ ಕೊಡಗು,
ಸ್ವೀಡಲ್ ಡಿಸೋಜಾ, ಶೈಲೇಶ್ ಕೆಂಗೇರಿ, ತಾರಾನಾಥ ಬೋಳಾರ್, ಪುಣ್ಯಕೊಟ್ಯಾನ್, ಗೋಪಾಲ್ ಮೂಲ್ಯ ಮುಂತಾದವರು ಅಭಿನಯಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕ ರಾಘವಸೂರ್ಯ, ಪ್ರದ್ಯಮ್ನ ನರಹಳ್ಳಿ- ದೀಪಕ್ ಕೋಟ್ಯಾನ್ ಸಾಹಿತ್ಯಕ್ಕೆ ಶ್ರೀಶಾಸ್ತ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಲ್ಯಾಮರಿಂಜ್ ನಿರ್ಮಲ್, ಸಂಕಲನ ಅನಿಲ್.ಡಿ-ಮಾವಿನ್ ಜೋಯಿಲ್ ಪಿಂಟೋ ಅವರದಾಗಿದೆ. ಕಾರ್ಕಳ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಅಂದಹಾಗೆ ಸಿನಿಮಾವು ಇದೇ ತಿಂಗಳು ಜನರಿಗೆ ತೋರಿಸಲು ಸಜ್ಜಾಗಿದೆ. ಶಕರು ಹೇಳುವಂತೆ `ಒಂದಾನೊಂದು ಕಾಲದಲ್ಲಿ' ಬರುವ ಹಾಡಿನ ಸಾಲು ಸೌಂಡಿಂಗ್ ಆಗಿರುವುದರಿಂದ ಅದನ್ನೆ ಶೀರ್ಷಿಕೆಯಾಗಿ ಬಳಸಲಾಗಿದೆ. ನಮ್ಮ ಸಿನಿಮಾವು ಚೋಮನದುಡಿಯ ಮುಂದುವರಿದ ಭಾಗ ಎನ್ನಬಹುದು. ಮಂದಗಾಮಿ ಚೋಮ ಹೋರಾಟ ಮಾಡಿದರೂ ಭೂಮಿ ಸಿಗುವುದಿಲ್ಲ. ಆತನ ಮಗ ಕಾಳ ನ್ಯಾಯಕ್ಕಾಗಿ ತೀವ್ರಗಾಮಿಯಾಗಿ ಬಿಚ್ಚುಗತ್ತಿಯನ್ನು ಉಪಯೋಗಿಸಿದಾಗ ಏನಾಗುತ್ತದೆ. ಅಂತಿಮವಾಗಿ ಅಪ್ಪನ ಆಸೆಯನ್ನು ಕಾಳ ಮತ್ತು ಬೆಳ್ಳಿ ಈಡೇರಿಸಿಕೊಳ್ಳುತ್ತಾರಾ ಎಂಬುದನ್ನು ಕಮರ್ಷಿಯಲ್ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರವನ್ನು ಕಾರಂತ ಟ್ರಸ್ಟ್ನವರು ನೋಡಿ ಆರ್ಶಿವರಿಸಿದ್ದಾರೆ. ಭಾವಗಳ ತೀವ್ರತೆಯನ್ನು ಅಚ್ಚುಕಟ್ಟಾಗಿ ಸೆರೆಹಿಡಿಯಲಾಗಿದೆ. ಚೋಮನ ಪಾತ್ರ ಶೇಕಡ ಇಪ್ಪತ್ತರಷ್ಟು ಬರುತ್ತದೆಂದು ಅನಿಲ್  ದೊರಸಮುದ್ರ ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು