LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಋತು ಆರಂಭಕ್ಕೆ ಚೋಪ್ರಾ ಸಿದ್ಧತೆ

ನವದೆಹಲಿ: ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಜಾವೆಲಿನ್ ಥ್ರೋಪಟು ನೀರಜ್ ಚೋಪ್ರಾ ಅವರು ಮೇ 10ರಂದು ಆರಂಭವಾಗುವ ಡೈಮಂಡ್ ಲೀಗ್ ಸರಣಿಯ ದೋಹಾ ಲೆಗ್‍ನಲ್ಲಿ ಹೊಸ ಋತು ಆರಂಭಿಸುವ ಸಿದ್ಧತೆಯಲ್ಲಿದ್ದಾರೆ.

ಚೀನಾದ ಹಾಂಗ್‍ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕದೊಂದಿಗೆ ತನ್ನ ಹಿಂದಿನ ಋತುವನ್ನು ಮುಗಿಸಿದ್ದ 26 ವರ್ಷದ ಚೋಪ್ರಾ, ಜುಲೈ- ಆಗಸ್ಟ್‍ನಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್‍ನಲ್ಲಿ ಚಿನ್ನವನ್ನು ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದಾರೆ.

2023ರ ಬುಡಾಪೆಸ್ಟ್ ವಿಶ್ವ ಚಾಂಪಿಯನ್‍ಷಿಪ್‍ನಲ್ಲಿ ಐದನೇ ಸ್ಥಾನ ಪಡೆದಿದ್ದ ಭಾರತದ ಮತ್ತೊಬ್ಬ ಜಾವೆಲಿನ್ ಥ್ರೋ ಅಥ್ಲೀಟ್ ಕಿಶೋರ್ ಜೇನಾ ಅವರು ಕತಾರ್ ರಾಜಧಾನಿಯಲ್ಲಿ ನಡೆಯುವ ಡೈಮಂಡ್ ಲೀಗ್‍ಗೆ ಪದಾರ್ಪಣೆ ಮಾಡಲಿದ್ದಾರೆ. ಅವರು ಏಷ್ಯನ್ ಗೇಮ್ಸ್‍ನಲ್ಲಿ 87.54 ಮೀ ವೈಯಕ್ತಿಕ ಶ್ರೇಷ್ಠ ಸಾಧನೆಯೊಂದಿಗೆ ಬೆಳ್ಳಿ ಪದಕ ಗೆದ್ದಿದ್ದರು.

ಡೈಮಂಡ್ ಲೀಗ್‍ನಲ್ಲಿ ಚೋಪ್ರಾ, ಜೇನಾ ಅವರು ಟೋಕಿಯೊ ಒಲಿಂಪಿಕ್ಸ್‍ನಲ್ಲಿ ಬೆಳ್ಳಿ ಗೆದ್ದ ಜೆಕ್ ಗಣರಾಜ್ಯದ ಜೇಕಬ್ ವಡ್ಲೇಚಾ ಮತ್ತು ಮಾಜಿ ವಿಶ್ವ ಚಾಂಪಿಯನ್ ಗ್ರೆನೆಡಾದ ಆಯಂಡರ್ಸನ್ ಪೀಟರ್ಸ್ ಅವರಂತಹ ಪ್ರತಿಸ್ಪರ್ಧಿಗಳನ್ನು ಎದುರಿಸಲಿದ್ದಾರೆ. ‘ಈ ವರ್ಷ ಒಲಿಂಪಿಕ್ಸ್ ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ಪ್ರಮುಖ ಗುರಿಯಾಗಿದೆ. ಅದರ ಜತೆಗೆ 90 ಮೀ ಗಡಿಯನ್ನು ದಾಟುವ ಪ್ರಯತ್ನವೂ ಮುಂದುವರಿಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು