LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ಗೆ ಕ್ರಿಸ್ ಗೇಲ್ ಫಿದಾ!

ವೈಭವ್ ಸೂರ್ಯವಂಶಿ ಅವರು ಕ್ರಿಸ್ ಗೇಲ್ ಅವರ ಸಿಕ್ಸರ್ ಗಳ ದಾಖಲೆ ಮುರಿಯುತ್ತಿದ್ದಂತೆಯೇ ಅವರಿಗೆ ಯೂನಿವರ್ಸಲ್ ಬೇಬಿ ಬಾಸ್ ಎಂದು ಬಿರುದು ಅಂಟಿಕೊಂಡಿತ್ತು. ಈ ಬಾಲಕನ ಬ್ಯಾಟಿಂಗ್ ವೈಭವವನ್ನು ನೋಡಿ ಸಂಭ್ರಮಪಟ್ಟ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಅವರು ಹೊಸ ನಿಕ್ ನೇಮ್ ಅನ್ನೇ ನೀಡಿಬಿಟ್ಟಿದ್ದಾರೆ. ಅವರ ಪ್ರಕಾರ 15ರ ಹರೆಯದ ಬಾಲಕ ಕ್ರಿಕೆಟ್ ಲೋಕದ `ನ್ಯೂ ಸಿಕ್ಸರ್ ಮೆಷಿನ್'!
ಯುವ ಆಟಗಾರನ ಈ ಅಮೋಘ ಆಟಕ್ಕೆ ಸ್ವತಃ ಕ್ರಿಸ್ ಗೇಲ್, ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್‌ನ ಎರಡು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದು, ವೈಭವ್ ಅವರನ್ನು ಅದ್ಭುತ ಆಟಗಾರ ಎಂದು ಶ್ಲಾಘಿಸಿದ್ದಾರೆ. ಫೋಟೋ ಜೊತೆಗಿನ ಒಕ್ಕಣೆಯಲ್ಲಿ "ವೈಭವ್ ನಿಜಕ್ಕೂ ಎಂತಹ ಅದ್ಭುತ ಆಟಗಾರ. ನಿನ್ನ ಆಟ ಅತ್ಯುತ್ತಮ ಮನರಂಜನೆ ನೀಡಿತು ಹುಡುಗ ! ನೀನು ಹೊಸ ಸಿಕ್ಸ್ ಮೆಷಿನ್," ಎಂದು ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ತಕ್ಷಣವೇ ವೈರಲ್ ಆಗಿದ್ದು ವೈಭವ್ ಸೂರ್ಯವಂಶಿ ಅವರು ಇದೀಗ ಎಲ್ಲೆಡೆ ನ್ಯೂ ಸಿಕ್ಸರ್ ಮೆಷಿನ್ ಎಂದೇ ಪ್ರಖ್ಯಾತರಾಗುತ್ತಿದ್ದಾರೆ.
ನ್ಯೂ ಚಂಡೀಗಢದಲ್ಲಿರುವ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಮೇ 27ರ ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 47 ರನ್ ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ ಲಗ್ಗೆ ಇಟ್ಟಿದೆ. ಫೈನಲ್ ಪ್ರವೇಶಕ್ಕಾಗಿ ಮೇ 29ರ ಶುಕ್ರವಾರದಂದು ನ್ಯೂಚಂಡೀಗಢದಲ್ಲೇ ನಡೆಯಲಿರುವ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಬೇಕಾಗಿದೆ.
ಎಲಿಮಿನೇಟರ್ ಪಂದ್ಯದಲ್ಲಿ ಕ್ರಿಕೆಟ್ ಲೋಕದ ಗಮನ ಸೆಳೆದಿದ್ದು ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಬಿರುಸಿನ ಬ್ಯಾಟಿಂಗ್. ಕೇವಲ 29 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 12 ಸಿಕ್ಸರ್‌ಗಳ ನೆರವಿನಿಂದ 97 ರನ್ ಸಿಡಿಸಿ ಇಡೀ ಕ್ರೀಡಾಂಗಣವನ್ನೇ ಮುಂತ್ರಮುಗ್ಧಗೊಳಿಸಿದರು. ಈ ಸ್ಫೋಟಕ ಇನಿಂಗ್ಸ್ ಮೂಲಕ ಅವರು ವೆಸ್ಟ್ ದಿಗ್ಗಜ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಬೃಹತ್ ದಾಖಲೆಯೊಂದನ್ನು ಮುರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು