LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

"ನವಾಡ ಮತಗಟ್ಟೆ ಬಳಿ ವಿವಿಧ ಪಕ್ಷಗಳ ಬೆಂಬಲಿಗರ ನಡುವೆ ಘರ್ಷಣೆ"

ನವಾಡ (ಬಿಹಾರ): ಇಂದು ಪ್ರಾರಂಭಗೊAಡಿರುವ ಬಿಹಾರ ವಿಧಾನಸಭಾ ಚುನಾವಣೆಯ ಎರಡನೆ ಮತ್ತು ಅಂತಿಮ ಹಂತದ ಮತದಾನದ ವೇಳೆ ನವಾಡ ಜಿಲ್ಲೆಯ ವಾರಿಸಾಲಿಗಂಜ್ ಪ್ರದೇಶದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ನವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧೀಮನ್, ``ಮತಗಟ್ಟೆಯಿಂದ ಸುಮಾರು ೧.೫ ಕಿಮೀ ದೂರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಂಬAಧಿಸಿದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಆ ಪ್ರದೇಶವು ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಮತದಾನ ಸುಗಮವಾಗಿ ನಡೆಯುತ್ತಿದೆ'' ಎಂದು ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ವಾಹನವೊಂದು ಹಾನಿಗೀಡಾಗಿದೆ ಎಂಬ ವದಂತಿಗಳನ್ನು ಅಲ್ಲಗಳೆದಿರುವ ಅವರು, ಈ ವದಂತಿಗಳು ಸಂಪೂರ್ಣ ನಿರಾಧಾರವಾಗಿದ್ದು, ಈ ಘಟನೆಯಲ್ಲಿ ಖಾಸಗಿ ವಾಹನವೊಂದು ಹಾನಿಗೀಡಾಗಿದೆ. ಈ ವಾಹನಕ್ಕೂ ಚುನಾವಣಾ ಕರ್ತವ್ಯಕ್ಕೂ ಯಾವುದೇ ಸಂಬAಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST