LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಮೋಡ ಮಳೆ ಮತ್ತು ಶೈಲ'ಶೀರ್ಷಿಕೆ ಟೀಸರ್ ಬಿಡುಗಡೆ

ಇದು 'ತಿಮ್ಮನ ಮೊಟ್ಟೆಗಳು' ತಂಡದಿAದ ತಯಾರಾದ ಮತ್ತೊAದು ವಿಭಿನ್ನ ಕಂಟೆAಟ್ ಸಿನಿಮಾ ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ನಿರ್ಮಾಣದಲ್ಲಿ ಎರಡನೇ ಪ್ರಯತ್ನವಾಗಿ ಸಿದ್ಧವಾಗುತ್ತಿರುವ ಚಿತ್ರ 'ಮೋಡ, ಮಳೆ ಮತ್ತು ಶೈಲ'. ವಿಭಿನ್ನ ಪ್ರಯತ್ನದ 'ತಿಮ್ಮನ ಮೊಟ್ಟೆಗಳು' ಚಿತ್ರಕ್ಕಾಗಿ ಒಂದಾಗಿದ್ದ ನಿರ್ದೇಶಕ ರಕ್ಷಿತ ತೀರ್ಥಹಳ್ಳಿ ಹಾಗೂ ನಿರ್ಮಾಪಕ ಆದರ್ಶ ಅಯ್ಯಂಗಾರ್ ಇದೀಗ ಮತ್ತೆ ಒಂದಾಗಿ 'ಮೋಡ, ಮಳೆ ಮತ್ತು ಶೈಲ' ಚಿತ್ರ ತಯಾರಿಸಿದ್ದಾರೆ.

ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯ ಪಾತ್ರದಲ್ಲಿ ಅಕ್ಷತ ಪಾಂಡವಪುರ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯ, ಉತ್ಪಲ್ ಗೌಡ, ರಾಘು ರಾಮನಕೊಪ್ಪ, ಬಲರಾಜ್ ವಾಡಿ, ಅಶ್ವಿನ್ ಹಾಸನ ಪ್ರಮುಖ ತಾರಾಬಳಗದಲ್ಲಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿಕೊಂಡಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ಬರಹಗಾರ ಮತ್ತು ನಿರ್ದೇಶಕ ರಕ್ಷಿತ ತೀರ್ಥಹಳ್ಳಿ, 'ಸದ್ಯ ನಮ್ಮ ಚಿತ್ರದ ಶೂಟಿಂಗ್ ಮುಕ್ತಾಯವಾಗಿ ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿದೆ. ಆದರ್ಶ ಅಯ್ಯಂಗಾರ್ ಅವರಿಗೆ ಕಥೆ ಹೇಳಿದಾಗ ಕಂಟೆAಟ್ ಸ್ಟಾçಂಗ್ ಆಗಿದೆ ಚಿತ್ರ ಮಾಡೋಣ ಎಂದರು. ಈ ಚಿತ್ರವನ್ನು ಸಂಪೂರ್ಣ ಮಳೆಯಲ್ಲಿಯೇ ಸಿಂಕ್ ಸೌAಡ್ ನಲ್ಲಿ ಶೂಟ್ ಮಾಡಲಾಗಿದೆ. ಈ ಮೊದಲಿನ ಮೂರು ಚಿತ್ರಗಳನ್ನು ವಿಷಯಗಳ ಮೇಲೆ ಮಾಡಿದ್ದೆ. ಈಗ ಶೈಲ ಕಥೆ ಹೇಳಲು ಹೊರಟಿದ್ದೇನೆ. ಕಲಾವಿದರು ಚೆನ್ನಾಗಿ ನಟಿಸಿದ್ದು, ಇದು ಕಲಾವಿದರ ಸಿನಿಮಾ ಎನ್ನಬಹುದು. ಡ್ರಾಮಾ ಥ್ರಿಲ್ಲರ್ ಜಾನರ್ ಸಿನಿಮಾ ಇದಾಗಿದೆ. ತೀರ್ಥಹಳ್ಳಿ, ಕುಂದಾಪುರ ಗಡಿಭಾಗಗಳ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ನಾನು ೨೦೧೨- ೧೩ರ ಕಾಲಘಟ್ಟದಲ್ಲಿ ನೋಡಿದ ಹಾಗೂ ಕೇಳಿದ ಒಂದಿಷ್ಟು ಕಥೆ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇನೆ' ಎಂದು ಹೇಳಿದರು.

ನಂತರ ಚಿತ್ರದ ಪ್ರಮುಖ ಪಾತ್ರಧಾರಿ ಅಕ್ಷತ ಪಾಂಡವಪುರ ಮಾತನಾಡಿ, 'ನಾನಿಲ್ಲಿ ಶೈಲ ಪಾತ್ರ ಮಾಡಿದ್ದೇನೆ. ಮೂಲತಃ ರಂಗಭೂಮಿ ಕಲಾವಿದೆ. ಇಂತಹ ಸಿನಿಮಾ ನನ್ನ ಕೆರಿಯರ್ ನಲ್ಲಿ ಮುಂದೆ ಸಿಗುತ್ತೋ ಇಲ್ವೋ..! ಹಾಗಾಗಿ ನಂಗೆ ಇದು ಸ್ಪೆಷಲ್ ಸಿನಿಮಾ. ಇದರಲ್ಲಿ ನಿರ್ದೇಶಕರು ಮಲೆನಾಡಿನ ಒಂಟಿ ಹೆಣ್ಣಿನ ಕಥೆ ಹೇಳ ಹೊರಟಿದ್ದಾರೆ. ವೇದಿಕೆಯಲ್ಲಿ ನಟರಾದ ಸಂಪತ್ ಮೈತ್ರೇಯ, ಉತ್ಪಲ್ ಗೌಡ, ಕಣಿವೆ ವಿನಯ್, ಅಶ್ವಿನ್ ಹಾಸನ, ಶ್ರೀಹರ್ಷ ಗೋಭಟ್ ಹಾಗೂ ಸಂಕಲನಕಾರ ಅಕ್ಷಯ ಪಿ. ರಾವ್, ಛಾಯಾಗ್ರಾಹಕ ಸಾಗರ ಹೆಚ್.ಜಿ ತಮ್ಮ ಅನುಭವ ಹಂಚಿಕೊAಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು