LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೇವನಹಳ್ಳಿ ಅಂ.ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ

ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.ನಂತರ ಮಾತನಾಡಿದ ಮುಖ್ಯಮಂತ್ರಿಗಳು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ.

ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ.

ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಪ್ರತಿ ವಾರ್ಡ್ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಮೂಲಕ, ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು , ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು