LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿಡುಮಾಮಿಡಿ ಮಠದ ಸೇವೆಗೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ಶ್ರೀ ನಿಡುಮಾಮಿಡಿ ಮಠ ಮಾನವ ಧರ್ಮಪೀಠ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ,ಧರ್ಮ, ಸಂಸ್ಕೃತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀಗಳ ಸೇವೆ ಗುಣಗಾನ ಮಾಡಿದ್ದಾರೆ.

ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.ಸ್ವಾಮೀಜಿಗಳು ನಿರ್ಭಿತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆದಾಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ, ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು.

ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು.

ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ `ಹೋರಾಟಕ್ಕೆ ಸಾವಿಲ್ಲ' ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು