LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಉತ್ತರ ನೀಡಲು ಸಿದ್ಧ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

ಬೆಳಗಾವಿ: ಇಂದಿನಿಂದ ಕುಂದಾನಗರಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯಲ್ಲಿ ವಿಧಾನಮಂಡಲದ ಕಲಾಪ ಆರಂಭಗೊಂಡಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಲಾಪದ ವೇಳೆ ಪ್ರತಿಪಕ್ಷಗಳು ಪ್ರಸ್ತಾಪ ಮಾಡುವ ವಿಷಯಗಳಿಗೆ ಉತ್ತರ ನೀಡಲು ಸರ್ಕಾರ ತಯಾರಿದೆ ಎಂದಿದ್ದಾರೆ.

ಈ ಬಾರಿಯ ಕಲಾಪದಲ್ಲಿ ಬಹುತೇಕ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಆದ್ಯತೆ ನೀಡಲಾಗುವುದು ಎಂದು ಸಹ ಅವರು ಹೇಳಿದ್ದಾರೆ.ಇದೇ ಸಂದರ್ಭದಲ್ಲಿ ನಿನ್ನೆ ಪ್ರಕಟಗೊಂಡ ನಾಲ್ಕು ಚುನಾವಣಾ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಘೋಷಣೆಗಳ ಸಂಬಂಧ ಫಲಿತಾಂಶದಲ್ಲಿ ಪರಿಣಾಮ ಬೀರಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ತೆಲಂಗಾಣದಲ್ಲಿ ಬಂದ ಫಲಿತಾಂಶವೇನು ಎಂದು ಸುದ್ದಿಗಾರರ ಪ್ರಶ್ನೆಗೆ ತಿರುಗೇಟು ನೀಡಿದರು.

ಮಧ್ಯಪ್ರದೇಶದ ಮುಖ್ಯಮಂತ್ರಿಯವರು ಸಹ ಗ್ಯಾರಂಟಿಗಳ ಘೋಷಣೆ ಮಾಡಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂದು ಏನು ಇಲ್ಲ. ಆರ್ಥಿಕವಾಗಿ ಹಿಂದುಳಿದಿರುವ ಬಡವರು, ಸಾಮಾನ್ಯರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಡವರ ಪರವಾಗಿರುವ ಕಾರ್ಯಕ್ರಮಗಳಿಗಾಗಿ ಗ್ಯಾರಂಟಿ ಹೆಸರಿಡಲಾಗಿದೆ ಎಂದು ತಿಳಿಸಿದರು.

ಸದನದಲ್ಲಿ ಬಿಜೆಪಿ-ಜೆಡಿಎಸ್‍ನವರು ಜಂಟಿ ಹೋರಾಟ ಮಾಡುತ್ತಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯಿಸಿ, ಅವರು ಜಂಟಿಯಾಗಾದರೂ ಮಾಡಲಿ, ಯಾವರೀತಿಯಾದರೂ ಮಾಡಲಿ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಲು ತಯಾರಿದ್ದೇವೆ. ಬಿಜೆಪಿಯವರು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಆರು ತಿಂಗಳು ತೆಗೆದುಕೊಂಡಿದ್ದಾರೆ. ಅವರು ನಮಗೇನು ಹೇಳುವುದು ಎಂದು ವಾಗ್ದಾಳಿ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು