ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಮುಖ್ಯಮಂತ್ರಿಯವರು ಪರಿಹರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಈಗಾಗಲೇ ಪ್ರತಿಭಟನಾನಿರತ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿಯವರು ಮಾತುಕತೆ ನಡೆಸಿದ್ದಾರೆ ನಮ್ಮ ವಿಶ್ವಾಸವಿಡಿ. ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದಾರೆ. ಆದರೆ ಅವರ ಮೇಲೆ ವಿಶ್ವಾಸವಿಲ್ಲ ಎಂದರೆ ಹೇಗೆ? ಸಮಸ್ಯೆ ಬಗೆಹರಿಯುವುದಾದರೂ ಹೆಂಗೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರಿಗೆ ನೀಡಿದ್ದ ಭರವಸೆಯನ್ನು ಗಮನದಲ್ಲಿಟ್ಟುಕೊಂಡು ಪರಿಹಾರದ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿದೇಶ ಪ್ರವಾಸದಲ್ಲಿದ್ದಾರೆ. ನಾಳೆ ವಾಪಸ್ ಬಂದ ನಂತರ ಪ್ರತಿಭಟನಾನಿರತರೊಂದಿಗೆ ಚರ್ಚಿಸಿ ತಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ಸಮಸ್ಯೆ ಬಗೆಹರಿಯುತ್ತದೆ ಎಂಬ ವಿಶ್ವಾ¸ ಇದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಅವರು ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿ ಈಗಾಗಲೇ ಬರಪರಿಹಾರಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ ಇದುವರೆಗೂ ನಮ್ಮ ಮನವಿಗೆ ಕೇಂದ್ರದಿAದ ಸಕಾರಾತ್ಮಕವಾಗಿ ಪ್ರತಿಕ್ರಿಯೆ ಬಂದಿಲ್ಲ, ಹಣವೂ ಬಿಡುಗಡೆಯಾಗಿಲ್ಲ. ಈ ಹಿಂದೆ ಬರ ತಲೆದೋರಿದಾಗ ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದ್ದೆವು. ಅದಕ್ಕೂ ಯಾವುದೇ ನಿಲುವನ್ನು ಕೇಂದ್ರ ಕೈಗೊಂಡಿರಲಿಲ್ಲ. ಕಡೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅನುದಾನ ಪಡೆಯಲಾಗಿತ್ತು ಎಂದು ತಿಳಿಸಿದರು. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಏನು ಮಾಡಬೇಕೆಂದು ಸುದೀರ್ಘವಾಗಿ ಚರ್ಚಿಸುತ್ತೇವೆ. ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.