LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ "ಚೈಲ್ಡು" ಚಿತ್ರದ ಚಿತ್ರೀಕರಣ ಪ್ರಾರಂಭ

ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, "ಹಫ್ತಾ" ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ "ಚೈಲ್ಡು". ಇತ್ತೀಚಿಗೆ ಈ ಚಿತ್ರದ
ಶೀರ್ಷಿಕೆಯನ್ನು ಸಮಾಜ ಸೇವಕರಾದ ಕಿರಣ್ ರೆಡ್ಡಿ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು
ಮಾತನಾಡಿದರು."ಹಫ್ತಾ" ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಚಿತ್ರವಿದು. ಆಕ್ಷನ್, ಕಾಮಿಡಿ, ಸೆಂಟಿಮೆAಟ್, ಲವ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ
ಅಂಶಗಳನ್ನೊಳಗೊAಡಿರುವ ಚಿತ್ರವಿದು.

ಇಂದಿನಿAದಲೇ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಆರAಭವಾಗಲಿದೆ. ತಾರಾ ಅನುರಾಧ, ಅಶ್ವಿನ್ ಹಾಸನ್, ವಲ್ಲಭ್, ಉದಯ್ ಪ್ರಸನ್ನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿರುತ್ತಾರೆ. ರಂಗಾಯಣ ರಘು ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಸುಧೀ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಪ್ರಕಾಶ್ ಹೆಬ್ಬಾಳ್ ತಿಳಿಸಿದರು.

ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ. ನಿರ್ದೇಶಕ ಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಅದಕ್ಕಿಂತ ನೀವು ಈ ಚಿತ್ರದ
ನಾಯಕ ಅಂತ ಹೇಳಿದ್ದು ಖುಷಿಯಾಯಿತು. ನನಗೆ ತಕ್ಕಂತಹ ಕಥೆಯನ್ನು ನಿರ್ದೇಶಕರು ಮಾಡಿದ್ದಾರೆ. ರೌಡಿಸಂ ಚಿತ್ರವಾದರೂ, ಲವ್ ಕೂಡ ಇರುತ್ತದೆ. ನನ್ನ
ಲುಕ್ ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ ನಟ ಕಾಕ್ರೋಜ್ ಸುಧೀ, ತಮ್ಮ ಬೆಳವಣಿಗೆಗೆ ಕಾರಣರಾದ ಮಾಧ್ಯಮದವರಿಗೆ ಧನ್ಯವಾದ ಹೇಳಿದರು. ಛಾಯಾಗ್ರಾಹಕ ಸಿದ್ದು ಕೆಂಚನಹಳ್ಳಿ, ಕಲಾವಿದರಾದ ಅಶ್ವಿನ್ ಹಾಸನ್, ವಲ್ಲಭ್ ಹಾಗೂ ಉದಯ್ ಪ್ರಸನ್ನ ಮುಂತಾದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು