LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಕರೆ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಮತ್ತು ವಿಜೃಂಭಣೆಯಿAದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಬಾರಿ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳ ಗೈರುಹಾಜರಿಯ ಬಗ್ಗೆ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕಠಿಣ ಸೂಚನೆ ನೀಡಿದರು. "ಅಂಬೇಡ್ಕರ್ ಜಯಂತಿ ರಾಷ್ಟ್ರೀಯ ಹಬ್ಬ. ಅಂದು ಬೆಳಿಗ್ಗೆಯಿಂದ ಸಂಜೆಯ ಕಾರ್ಯಕ್ರಮದ ಮುಕ್ತಾಯದವರೆಗೆ ಎಲ್ಲಾ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಸಿದರು.ಜಯಂತಿಯ ಅಂಗವಾಗಿ ಇಡೀ ಕೋಲಾರ ನಗರವನ್ನು ಒಂದು ತಿಂಗಳ ಕಾಲ ನೀಲಿ ಬಣ್ಣದ ಧ್ವಜಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲು ತೀರ್ಮಾನಿಸಲಾಯಿತು.ಅಂದು ಬೆಳಿಗ್ಗೆ 10:30ಕ್ಕೆ ಮೆರವಣಿಗೆ ಆರಂಭವಾಗಲಿದ್ದು, ವಿವಿಧ ಇಲಾಖೆಗಳಿಂದ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಸ್ತಬ್ದಚಿತ್ರಗಳು ಪಾಲ್ಗೊಳ್ಳಲಿವೆ. ಮುಖಂಡರ ಬೇಡಿಕೆಯಂತೆ ಅಂಬೇಡ್ಕರ್ ಭವನಕ್ಕೆ ಜಾಗ ಮೀಸಲಿಡುವುದು ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಅಂಬೇಡ್ಕರ್ ಅವರ ಜೀವನ ಸಂದೇಶ ಸಾರುವ ಎಲ್‌ಇಡಿ ಡಿಸ್‌ಪ್ಲೇ ಅಳವಡಿಸಲು ಜಿಲ್ಲಾಧಿಕಾರಿಗಳು ಸಮ್ಮತಿ ಸೂಚಿಸಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಟಾಪ್ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು.'ಸಂವಿಧಾನವೇ ಬೆಳಕು' ಎಂಬ ಶೀರ್ಷಿಕೆಯಡಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಹೊರತರಲು ಸಭೆಯಲ್ಲಿ ನಿರ್ಧರಿಸಲಾಯಿತು.ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ ಮತ್ತು ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಪ್ರತಿ ಸಮಿತಿಗೆ ಜವಾಬ್ದಾರಿಯುತ ಅಧಿಕಾರಿಗಳನ್ನು ನೇಮಿಸಿ, ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್. ನಟೇಶ್, ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್, ಸಮಾಜ ಕಲ್ಯಾಣ ಇಲಾಖೆಯ ಶ್ರೀನಿವಾಸನ್, ಕೆ.ಎಸ್.ಆರ್.ಟಿ.ಸಿ ವಿಭಾಗೀ ನಿಯಂತ್ರಣಾಧಿಕಾರಿ ಶ್ರೀನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜಿ.ಶ್ರೀನಿವಾಸ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ಎಂ.ನಾರಾಯಣಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಜಗಧೀಶ್, ಸಮಾಜದ ಮುಂಖಡರಾದ ಡಾ.ಎಂ.ಚAದ್ರಶೇಖರ್, ಟಿ.ವಿಜಯಕುಮಾರ್, ಡಿಪಿಎಸ್ ಮುನಿರಾಜು, ಪಂಡಿತ್ ಮುನಿವೆಂಕಟಪ್ಪ, ಕೆ. ಜಯದೇವ್, ದಲಿತ್ ನಾರಾಯಣಸ್ವಾಮಿ, ಹಾರೋಹಳ್ಳಿ ರವಿ, ಚಂದ್ರಮೌಳಿ, ರಾಜಕುಮಾರ್, ರೈತ ಮುಖಂಡ ಅಬ್ಬಿಣಿ ಶಿವಪ್ಪ, ಬಿ. ಶ್ರೀರಂಗ, ಕುವೆಂಪು ನಗರ ಆನಂದ್, ವಾಲ್ಮೀಕಿ ನರಸಿಂಹಯ್ಯ, ವೆಂಕಟಾಚಲಪತಿ, ಆಲೇರಿ ಮುನಿರಾಜು, ಕಾಂಗ್ರೆಸ್ ಮುಖಂಡ ರವಿಕುಮಾರ್, ಕೋಟೆ ಶ್ರೀನಿವಾಸ್, ಡಿ ಎಸ್ ಎಸ್ ಮಂಜುಳ, ನಾಗೇಶ್, ಮತ್ತಿಕುಂಟೆ ಕೃಷ್ಣಪ್ಪ, ಗಾಂಧೀನಗರ ಲಕ್ಷ್ಮಣ, ವಾಲ್ಮೀಕಿ ಮಂಜುಳ, ಮತ್ತಿಕುಂಟೆ ನಾರಾಯಣಸ್ವಾಮಿ, ನಾಗನಾಳ ಶಂಕರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ದಲಿತ ಸಂಘಟನೆಗಳ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು