LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು: ಜಿಲ್ಲಾಧಿಕಾರಿ ಜಿ.ಪ್ರಭು

ಚಿಕ್ಕಬಳ್ಳಾಪುರ: ಕುಡಿಯುವ ನೀರಿನ ಪೂರೈಕೆಯಲ್ಲಿ ಯವುದೇ ಕಾರಣಕ್ಕೂ ಜಿಲ್ಲೆಯಲ್ಲಿ ವೆತ್ಯಯ ಆಗಬಾರದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ “ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶ ಹಾಗೂ ನಗರ ಪ್ರದೇಶದ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆ ಕಂಡು ಬಂದರೆ ತುರ್ತು ಕ್ರಮವಾಗಿ ಕೂಡಲೆ “ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲು ಕ್ರಮ ವಹಿಸಬೇಕು. ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದು, ಯಾವ ಕೊಳವೆ ಬಾವಿ ನೀರು ಯಾವ ಸಂದರ್ಭದಲ್ಲಿ ನಿಂತು ಹೋಗಲಿದೆ ಹೇಳಲಿಕ್ಕೆ ಆಗುವುದಿಲ್ಲ. ಆದ್ದರಿಂದ ಟ್ಯಾಂಕರ್ ಮೂಲಕವಾಗಲಿ ಅಥವಾ ಖಾಸಗಿ ಕೊಳವೆ ಬಾವಿ ಮೂಲಕ ನೀರು ಪೂರೈಸುವ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆ ನಂತರ ಜಲಜೀವನ್ ಮಿಷನ್ ಯೋಜನೆಯಡಿ ಅಥವಾ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಅನುಮೋದನೆ ಪಡೆದುಕೊಂಡು ಕೊಳವೆ ಬಾವಿ ಕೊರೆದು ನೀರಿನ ಸಮಸ್ಯೆ ನೀಗಿಸಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯ್ತಿಗಳ ಕಾರ್ಯ ನಿರ್ವಹಣಾಧಿಕಾರಿಗಳು, ನಗರಾಡಳಿತ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ತಾಲ್ಲೂಕು ತಹಸೀಲ್ದಾರರು ಹೆಚ್ಚಿನ ನಿಗಾವಹಿಸಿ ದಿನ ನಿತ್ಯದ ನೀರಿನ ಪೂರೈಕೆ ಬಗ್ಗೆ ಮಾಹಿತಿ ಪಡೆಯಬೇಕು ಎಂದರು.ಪ್ರಸ್ತುತ ಚಿಕ್ಕಬಳ್ಳಾಪುರ ತಾಲ್ಲೂಕಿನ ಕವರನಹಳ್ಳಿ, ಕಣಿತಹಳ್ಳಿ, ನಕ್ಕಲಹಳ್ಳಿ ಮತ್ತು ಮಧುರೇನಹಳ್ಳಿ. ಚಿಂತಾಮಣಿ ತಾಲ್ಲೂಕಿನ ಗೌಡನಹಳ್ಳಿ, ಶೆಟ್ಟಿಹಳ್ಳಿ, ಮಲ್ಕಪುರ ಮತ್ತು ಕೃಷ್ಣಮ್ಮನ ಹೊಸಹಳ್ಳಿ. ಬಾಗೇಪಲ್ಲಿ ತಾಲ್ಲೂಕಿನ ಚಾಮಲವಾರಿಪಲ್ಲಿ, ಯಲಗಲಪಲ್ಲಿ, ವೀರಾಪುರ, ಮಲ್ಲೆಪಲ್ಲಿ ಮತ್ತು ಗಂಗರೆಡ್ಡಿಪಲ್ಲಿ. ಶಿಡ್ಲಘಟ್ಟ ತಾಲ್ಲೂಕಿನ ವಲ್ಲಪ್ನಹಳ್ಳಿ, ಚೀಮಂಗಲ, ಹೇಮಾರ್ಲಹಳ್ಳಿ, ಜಂಗಮಕೋಟೆ, ಭಕ್ತರಹಳ್ಳಿ, ಪಲಿಚೆರ್ಲು, ತದೂರು ಮತ್ತು ಮುಗಲಪಡಿ. ಗೌರಿಬಿದನೂರು ತಾಲ್ಲೂಕಿನ ಸಿದ್ದೇನಹಳ್ಳಿ. ಗುಡಿಬಂಡೆ ತಾಲ್ಲೂಕಿನ ಚಿನ್ನಹಳ್ಳಿ ಸೇರಿದಂತೆ ಒಟ್ಟು 23 ಗ್ರಾಮಗಳಿಗೆ ಕುಡಿಯುವ ನೀರನ್ನು ಖಾಸಗಿ ಕೊಳವೆ ಬಾವಿಗಳ ಮಾಲೀಕರ ಸಹಕಾರ ಪಡೆದು ನೀರು ಪೂರೈಸಲಾಗುತ್ತಿದೆ. ಬಾಗೇಪಲ್ಲಿ ತಾಲ್ಲೂಕಿನ ಮಲ್ಲೆಪಲ್ಲಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಪ್ರಸ್ತುತ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಮುನ್ನೆಚ್ಚರಿಕೆಯಾಗಿ ಗುರ್ತಿಸಲು ನಿರಂತರ ನಿಗಾ ಇಡಲು ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ಸೂಚಿಸಿದರು.ಇನ್ನೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ಗೌರಿಬಿದನೂರು ನಗರದ 4 ವಾರ್ಡ್ ಗಳು, ಶಿಡ್ಲಘಟ್ಟ ನಗರದ 6 ವಾರ್ಡ್ ಗಳು, ಚಿಂತಾಮಣಿಯ 4 ವಾರ್ಡ್ ಗಳು ಹಾಗೂ ಬಾಗೇಪಲ್ಲಿಯ 4 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸದ್ಯಕ್ಕೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ ಈ ವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಎದುರಾಗಿಲ್ಲ ಎಂದು ತಿಳಿಸಿದರು.ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಎಲ್ಲ ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಣಾಧಿಕಾರಿಗಳು, ನಗರಾಡಳಿತ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು