LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಗ್ರಾಹಕನ ಸೋಗಿನಲ್ಲಿ ಬಂದು ದರೋಡೆ

ಬೆಂಗಳೂರು: ಗ್ರಾಹಕನ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಂಕ್ ನೌಕರನ ಬೆದರಿಸಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬನ್ನೇರುಘಟ್ಟ ರಸ್ತೆಯ ಶೆಲ್ ಪೆಟ್ರೋಲ್ ಬಂಕ್‍ನಲ್ಲಿ ನಿನ್ನೆ ತಡರಾತ್ರಿ 12.30ರ ವೇಳೆ ಪಟ್ರೋಲ್ ಬಂಕ್ ನೌಕರ ಸ್ವರಾಜ್ ಎಂಬುವವನಿಂದ ಸುಲಿಗೆಕೋರ 2 ಮೊಬೈಲ್ ಹಾಗೂ 4,500 ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಈ ಸಂಬಂಧ ದೂರು ಪಡೆದು ಪ್ರಕರಣ ದಾಖಲಿಸಿ ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ವರಾಜ್ ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿರುವ ಅಪರಿಚಿತ, ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ.

ಬಳಿಕ ಹಣ ಕೊಡದೆ ಮಾರಕಾಸ್ತ್ರ ತೋರಿಸಿ ಸ್ವರಾಜ್‍ನನ್ನು ಬೆದರಿಸಿ, ಎರಡು ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ವೇಳೆ ಸ್ವರಾಜ್ ಸಹಾಯಕ್ಕಾಗಿ ಕೂಗಿದ್ದು, ಉಳಿದ ಸಿಬ್ಬಂದಿ ಬರುವ ವೇಳೆಗೆ ದುಷ್ಕರ್ಮಿ ತಪ್ಪಿಸಿಕೊಂಡಿದ್ದಾನೆ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು