LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

50 ದಿನ ಪೂರೈಸಿದ `ಕೆರೆಬೇಟೆ'

ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಸಿನಿಮಾ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕನ್ನಡ ಸಿನಿಮಾಗಳು ಹಿಟ್ ಆಗುತ್ತಿಲ್ಲ, ಚಿತ್ರಮಂದಿರಕ್ಕೆ ಜನ ಬರ್ತಾ ಇಲ್ಲ ಈ ಪರಿಸ್ಥಿತಿಯಲ್ಲೂ ಕರೆಬೇಟೆ 50 ದಿನ ಪೂರೈಸಿರುವುದು ಖುಷಿಯ ವಿಚಾರ. ನಿರ್ದೇಶಕ ರಾಜಗುರು ಮತ್ತು ನಾಯಕ ಗೌರಿಶಂಕರ್ ತುಂಬಾ ಕಷ್ಟಪಟ್ಟು ಇಷ್ಟಪಟ್ಟು ಮಾಡಿದ ಸಿನಿಮಾ ಕೆರೆಬೇಟೆ.

ಈ ಸಿನಿಮಾ ಭಾರಿ ನಿರೀಕ್ಷೆ ಮತ್ತು ಕುತೂಹಲದೊಂದಿಗೆ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿತ್ತು. ಕುತೂಹಲಕ್ಕೆ ತಕ್ಕಂತೆ ಸಿನಿಮಾ ಕೂಡ ಅದ್ಭುತವಾಗಿ ಮೂಡಿ ಬಂದಿತ್ತು ಆದರೆ ಯಾಕೋ ದೊಡ್ಡಮಟ್ಟದ ಸಕ್ಸಸ್ ಕಾಣಲಿಲ್ಲ. ಈ ಬೇಸರ ಕೂಡಾ ಸಿನಿಮಾ ತಂಡಕ್ಕಿದೆ. ಕಮರ್ಷಿಯಲಿ ದೊಡ್ಡಮಟ್ಟದ ಸಕ್ಸಸ್ ಆಗದಿದ್ದರೂ ಜನರ ಮನ ಗೆದ್ದಿರುವುದು ಸಿನಿಮಾ ತಂಡದ ಶ್ರಮಕ್ಕೆ ಸಿಕ್ಕ ಫಲವಾಗಿದೆ.

ಇದೇ ಖುಷಿಯಲ್ಲಿ ಸಿನಿಮಾ ತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಸಿನಿಮಾಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಮೊಮೆಂಟುಗಳನ್ನು ಕೊಡುವ ಮೂಲಕ ಸಿನಿಮಾತಂಡ 50 ದಿನ ಪೂರೈಸಿದ ಸಂಭ್ರಮವನ್ನು ಆಚರಿಸಿತು. ಕೆರೆ ಬೇಟೆಯ ಸಂಭ್ರಮಕ್ಕೆ ನಿರ್ದೇಶಕರಾದ ಶಶಾಂಕ್, ದಯಾಳ್ ಪದ್ಮನಾಭ ಮತ್ತು ನಿರ್ಮಾಪಕ ಉದಯ ಮೆಹ್ತ ನಟ ಪ್ರಥಮ್ ಸಾಕ್ಷಿಯಾದರು.

ಈ ವೇಳೆ ಮಾತನಾಡಿದ ನಾಯಕ ಗೌರಿ ಶಂಕರ್ 'ಸಿನಿಮಾ ಕಮರ್ಷಿಯಲಿ ದೊಡ್ಡ ಮಟ್ಟಕ್ಕೆ ಹಿಟ್ಟಾಗಿಲ್ಲ, ಆದರೆ ಜನ ಒಳ್ಳೆಯ ರಿವ್ಯೂಕೊಟ್ಟಿದ್ದಾರೆ. ಎಲ್ಲೇ ಹೋದರೂ ಕೆರೆಬೇಟೆ ಹೀರೋ ಅಂತ ಗುರುತಿಸುತ್ತಾರೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ 50 ದಿನಗಳು ಓಡಿದೆ. ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾ ಇದೆ. ಈ ಖುಷಿಯನ್ನು ನಿಮ್ಮ ಜೊತೆ ಹಂಚಿಕೊಳ್ಳಬೇಕು ಎನ್ನುವ ಕಾರಣಕ್ಕೆ ಐವತ್ತು ದಿನದ ಸಂಭ್ರಮವನ್ನು ಇಟ್ಟುಕೊಂಡಿದ್ದೇವೆ. ಕೆರೆಬೇಟೆ ಸಿನಿಮಾ ನನಗೆ ದೊಡ್ಡ ಕನಸಾಗಿತ್ತು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು