LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸುಪ್ರೀಂ ಆದೇಶ ಪಾಲನೆ ಅನಿವಾರ್ಯ- ಬೈರತಿ ಸುರೇಶ್


ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸರ್ಕಾರದ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಬೈಕ್ ಟ್ಯಾಕ್ಸಿಯನ್ನೇ ನಂಬಿಕೊAಡಿದ್ದ ಸಾವಿರಾರು ಸವಾರರಿಗೆ (ರೈಡರ್‌ಗಳಿಗೆ) ದೊಡ್ಡ ನಿರಾಳತೆ ಸಿಕ್ಕಂತಾಗಿದ್ದು, ಇನ್ನು ಮುಂದೆ ಯಾವುದೇ ಆತಂಕವಿಲ್ಲದೆ ಸೇವೆ ಒದಗಿಸಲು ದಾರಿಯಾಗಿದೆ. ನ್ಯಾಯಾಲಯದ ಈ ಆದೇಶಕ್ಕೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ. ಆದಾಗ್ಯೂ, ಅಡ್ವೊಕೇಟ್ ಜನರಲ್ (ಎಜಿ) ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಬೈಕ್ ಟ್ಯಾಕ್ಸಿ ಸೇವೆಗೆ ಹಲವು ನಿಯಮಗಳನ್ನು ಹೇರುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸೂಕ್ತ ಮಾರ್ಗಸೂಚಿ ಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣಿಸುವ ಸಹಪ್ರಯಾಣಿಕರು, ವಿಶೇಷವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸರ್ಕಾರ ಮೊದಲ ಆದ್ಯತೆ ನೀಡಲಿದೆ ಎಂದು ಬೈರತಿ ಸುರೇಶ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವ ಸವಾರರ ದಾಖಲೆಗಳು, ವಾಹನಕ್ಕೆ ಜಿಪಿಎಸ್ ಅಳವಡಿಕೆ, ಕಡ್ಡಾಯ ವಿಮೆ ಹಾಗೂ ಇತರ ಅಗತ್ಯ ದಾಖಲೆಗಳ ಪರಿಶೀಲನೆ ಸೇರಿದಂತೆ ಕಠಿಣ ನಿಯಮಗಳನ್ನು ರೂಪಿಸಿ ಸೇವೆಗೆ ಅವಕಾಶ ಕಲ್ಪಿಸಲು ನಿರ್ಧರಿಸ ಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವುದರ ಜೊತೆಗೆ, ಕಠಿಣ ನಿಯಮಾವಳಿಗಳ ಚೌಕಟ್ಟಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST