LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ಕನ್ನಡಪರ ಹೋರಾಟಗಾರರ ಬಂಧನಕ್ಕೆ ಖಂಡನೆ'

ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆದೇಶದಂತೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡವಿರಬೇಕು ಎಂಬ ನಿಯಮವಿದ್ದರು ಸಹ ಬೆಂಗಳೂರಿನ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಹಾಕದಿರುವ ಕಾರಣ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ್ರು ಮತ್ತು ಕರವೇ ಕಾರ್ಯಕರ್ತರನ್ನು ಬಂಧಿಸಿರುವುದು ಸಮಸ್ತ ಕನ್ನಡಿಗರಿಗೆ ನೋವುಂಟಾಗಿದೆ.

ಸಾರಿಗೆ ನೌಕರರ ಸಂಕಷ್ಟಕ್ಕೆ ಗೌಡ್ರು ಅನೇಕ ಬಾರಿ ಧ್ವನಿಯಾಗಿದ್ದಾರೆ, ಅಂತಾರಾಜ್ಯ ಸಾರಿಗೆ ವ್ಯವಸ್ಥೆಗೆ ಹೊರ ರಾಜ್ಯಗಳಿಗೆ ತೆರಳುವ ಬಸ್ಸುಗಳಿಗೆ ಅಲ್ಲಿಯ ಸ್ಥಳೀಯರು ದಾಳಿ ಮಾಡಿದ ಅನೇಕ ಸಂದರ್ಭಗಳಲ್ಲಿ ಸನ್ಮಾನ್ಯ ನಾರಾಯಣಗೌಡ್ರು ರಾಜ್ಯಾದ್ಯಂತ ಹೋರಾಟ ಮಾಡಿ ಸಾರಿಗೆ ನೌಕರರಿಗೆ ಧೈರ್ಯ ತುಂಬಿದ್ದಾರೆ. ಕಳೆದ 35 ವರ್ಷ ಗಳಿಂದ ಕನ್ನಡ- ಕನ್ನಡಿಗ-ಕರ್ನಾಟಕ ಉಳಿವಿಗಾಗಿ ಹಗಲಿರುಳು ಎನ್ನದೆ ಶ್ರಮಿಸಿದ್ದಾರೆ, ಪರಭಾಷಿಕರ ಮಧ್ಯೆ ಕನ್ನಡಿಗರು ಬೆಂಗಳೂರಿನಲ್ಲಿ ಧೈರ್ಯವಾಗಿ ಎದೆಯುಬ್ಬಿಸಿ ನಾನು ಕನ್ನಡಿಗ ಎಂದು ಹೇಳಿಕೊಳ್ಳಲು ನಾರಾಯಣಗೌಡ್ರು ಮತ್ತು ಕನ್ನಡ ಹೋರಾಟಗಾರರೆ ಕಾರಣ.

ಈ ನಾಡು ಕಂಡ ಅಪ್ರತಿಮ ಹೋರಾಟಗಾರ, ನಾಡು ನುಡಿ ನೆಲ ಜಲ ಭಾಷೆ ಮತ್ತು ನಾಡಿನ ಸಂಸ್ಕೃತಿಯ ರಕ್ಷಣೆಗೆ ಜೀವನವನ್ನೇ ಮುಡಿಪಾಗಿಟ್ಟಿರುವ ನಾಡಿನ ಹಿರಿಯ ಕನ್ನಡ ಪರ ಹೋರಾಟಗಾರರಾದ ಟಿ.ಎ.ನಾರಾಯಣಗೌಡ್ರು ಮತ್ತು ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನವು ಒತ್ತಾಯಿಸುತ್ತದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ (ನೊಂ) ಅಧ್ಯಕ್ಷ ಪ್ರೀತಮ್ ಕೆ.ಎಸ್. ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು