LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೇಂದ್ರದ ರೈತ ವಿರೋಧಿ ನೀತಿಗೆ ಆಪ್‍ಖಂಡನೆ

ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ- ಜನವಿರೋಧಿ ನೀತಿಗಳ ವಿರುದ್ಧ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆಬ್ರವರಿ 13 ರಂದು ಸಂಯುಕ್ತ ಕಿಸಾನ್ ಮೋರ್ಛಾ ಹಾಗೂ ದೇಶದ ಎಲ್ಲಾ ರೈತ ಸಂಘಗಳು ಜಂಟಿಯಾಗಿ ಹಮ್ಮಿಕೊಂಡಿರುವ ಮಹಾಧರಣಿಗೆ ತಡೆಯೊಡ್ಡಲು ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲಾ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತಿದೆ.

ಅನ್ನ ಕೊಡುವ ರೈತರು ದೆಹಲಿಗೆ ಬರದಂತೆ ತಡೆಯೊಡ್ಡುವುದಕ್ಕೆ ಇಂಡಿ ಯಾ- ಪಾಕಿಸ್ತಾನ ಗಡಿಯಲ್ಲಿ ಹಾಕುವ ರೀತಿಯಲ್ಲಿ ಕಬ್ಬಿಣದ ಮುಳ್ಳಿನ ಬೇಲಿಗಳನ್ನು ಹಾಕಲಾಗಿದೆ, ರಸ್ತೆಗಳಲ್ಲಿ ದಪ್ಪ ದಪ್ಪ ಸ್ಟೀಲ್ ಮೊಳೆಗಳನ್ನು ನೆಡಲಾಗಿದೆ. ಹೈವೇ ಗಳನ್ನು ಬಂದ್ ಮಾಡಿ ದೊಡ್ಡ ದೊಡ್ಡ ಸಿಮೆಂಟ್ ಸ್ಲ್ಯಾಬ್ ಗಳನ್ನು ಹಾಕಲಾಗಿದೆ.

ಎಲ್ಲಿ ಸಾಧ್ಯವೋ ಅಲ್ಲಿ ರೈತರನ್ನು ಬಂಧಿಸಲಾಗುತ್ತಿದೆ. ಬಿಜೆಪಿ ಆಡಳಿತ ಇರುವ ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ಪೆÇಲೀಸ್ ಬಲದಿಂದ ರೈತರನ್ನು ಬಂಧಿಸಿ ಹಿಂಸೆ ಪಡಿಸಲಾಗುತ್ತಿದೆ. ಈ ರಾಜ್ಯಗಳ ಪೊಲೀಸರಿಂದ ಗುಂಡಿನ ದಾಳಿಯ ತಾಲೀಮು ನಡೆಸಲಾಗುತ್ತಿದೆ.

ದೆಹಲಿಯ ಗಡಿಗಳಲ್ಲಿ ಅತೀ ಹೆಚ್ಚು ಸೇನೆ ನಿಯೋಜನೆಗೊಂಡಿದೆ. ಕರ್ನಾಟಕದಿಂದ ಫೆಬ್ರವರಿ 13 ರ ಧರಣಿಗೆ ಹೊರಟಿದ್ದ 300ಕ್ಕೂ ಹೆಚ್ಚು ರೈತರನ್ನು ಮಾರ್ಗ ಮಧ್ಯೆದಲ್ಲಿಯೇ ಭೋಪಾಲ್ ನಗರದಲ್ಲಿ, ರೈಲಿನಿಂದ ಇಳಿಸಿ, ಅಕ್ರಮವಾಗಿ ಬಂಧಿಸಿ, ಕಲ್ಯಾಣ ಮಂಟಪಗಳಲ್ಲಿ ಕೂಡಿ ಹಾಕಲಾಗಿದೆ, ಈ ವೇಳೆಯಲ್ಲಿ ಪೊಲೀಸರ ತಳ್ಳಾಟದಿಂದ, ರಾಜ್ಯದ ಪ್ರಮುಖ ರೈತ ನಾಯಕರಾದ ಶ್ರೀ ಕುರಬೂರು ಶಾಂತಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ಪದ್ಮಾ ಶಾಂತಕುಮಾರ್ ಅವರಿಗೂ ಸೇರಿದಂತೆ ಹಲವು ರೈತರಿಗೆ ಗಾಯಗಳಾಗಿವೆ.

ಅನ್ನ ಕೊಡುವ ರೈತರನ್ನು ಉಗ್ರಗಾಮಿಗಳ ರೀತಿಯಲ್ಲಿ ಬಿಂಬಿಸಿಕೊಂಡು ಅವರಿಗೆ ತಡೆಯೊಡ್ಡುತ್ತಿರುವ ಈ ಸರ್ವಾಧಿಕಾರಿ ಮನಸ್ಥಿತಿಯ ಕೇಂದ್ರ ಸರ್ಕಾರದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ.ರೈತರ ಪ್ರಮುಖ ಬೇಡಿಕೆಗಳಾದ ರೈತರ ಸಾಲಮನ್ನಾ ಮಾಡಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರು ಬೆಳೆದ ಬೆಳೆಗೆ ಸರಿಯಾದ ಎಂಎಸ್ಪಿ ನಿಗದಿಯಾಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಕೊಡಬೇಕು. ಈ ಬೇಡಿಕೆಗಳೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಹಾಗೂ ರೈತರನ್ನು ಉಗ್ರಗಾಮಿಗಳಂತೆ ನೋಡುವ ಮನಸ್ಥಿತಿಯನ್ನು ಕೇಂದ್ರ ಸರಕಾರ ಬಿಡಬೇಕು,

ಈಗ ವಿವಿಧ ರಾಜ್ಯಗಳಲ್ಲಿ ಬಂಧಿಸಿರುವ ರಾಜ್ಯದ ರೈತರನ್ನೂ ಸೇರಿದಂತೆ ಎಲ್ಲಾ ರೈತರನ್ನು ಬಿಡುಗಡೆ ಮಾಡಿ ಅವರು ಪ್ರತಿಭಟನೆಗೆ ತೆರಳಲು ಅನುವು ಮಾಡಿಕೊಡಬೇಕು, ರೈತರ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಮಾಡುವ ಪ್ರಧಾನ ಮಂತ್ರಿಗಳು ಮತ್ತು ಕೇಂದ್ರ ಸಚಿವರು ರೈತರ ಸಾಂವಿಧಾನಿಕ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಈಗ ನಿಯೋಜಿಸಿರುವ ಸೇನೆ ಹಾಗೂ ಪೊಲೀಸ್ ಹಿಂತೆಗೆದುಕೊಳ್ಳಬೇಕು ಮತ್ತು ರೈತರಿಗೆ ಶಾಂತಿಯುತ ಪ್ರತಿಭಟನೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಈ ಮೂಲಕ ಒತ್ತಾಯ ಮಾಡುತ್ತಿದ್ದೇವೆ, ಕೇಂದ್ರ ಸರ್ಕಾರದ ಇದೇ ರೀತಿಯ ಸರ್ವಾಧಿಕಾರಿ ಧೋರಣೆ ಮುಂದುವರೆದರೆ, ರಾಷ್ಟ್ರದಾದ್ಯಂತ ರೈತರ ಪರವಾಗಿ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷವು ಎಚ್ಚರಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು