LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಪಾರ ಮೊತ್ತದ ಚುನಾವಣಾ ಉಡುಗೊರೆಗಳ ಜಪ್ತಿ

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಅಧಿಕಾರಿಗಳು ಹಾಗೂ ಪೆÇಲೀಸರು ನಡೆಸಿದ ತಪಾಸಣೆ ಸಂದರ್ಭದಲ್ಲಿ ರಾಜ್ಯದಲ್ಲಿ 2,77,59,00,168 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದಾರೆ.

ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾ.16 ರಿಂದ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿನ್ನೆಯವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪೊಲೀಸ್, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಒಟ್ಟು 57,65,83,037 ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ, ನಗದು, ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಬಕಾರಿ ಇಲಾಖೆ 1,43,10,75,607 ರೂ. ಮೌಲ್ಯದ ಮದ್ಯ, ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆ ಒಟ್ಟು 10,98,20,120 ರೂ. ಮೌಲ್ಯದ ನಗದು, ಚಿನ್ನ, ವಜ್ರಾಭರಣಗಳನ್ನು ಜಪ್ತಿ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆಯು 65,84,21,404 ರೂ. ಮೌಲ್ಯದ ಚಿನ್ನ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನೀತಿ ಸಂಹಿತೆ ಜಾರಿಗೆ ಬಂದಂದಿನಿಂದ ನಿನ್ನೆಯವರೆಗೆ 35,61,95,342 ರೂ. ನಗದನ್ನು 1.43 ಕೋಟಿ ರೂ. ಮೌಲ್ಯದ ಮದ್ಯ, 1.51 ಕೋಟಿ ರೂ. ಮೌಲ್ಯದ ಡ್ರಗ್ಸ್ 9.48 ಕೋಟಿ ರೂ. ಮೌಲ್ಯದ ಚಿನ್ನ, 27.23 ಲಕ್ಷ ಮೌಲ್ಯದ ಬೆಳ್ಳಿ, 9 ಲಕ್ಷ ಮೌಲ್ಯದ ವಜ್ರಾಭರಣ, 71.74 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.ಜಪ್ತಿ ಮಾಡಲಾದ ನಗದು, ವಸ್ತುಗಳಿಗೆ ಸಂಬಂಧಿಸಿದಂತೆ 1384 ಎಫ್‍ಐಆರ್ಗಳನ್ನು ಈತನಕ ದಾಖಲಿಸಲಾಗಿದೆ.
ಅಲ್ಲದೆ, ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸ್ ತಂಡದವರು 4 ಕೋಟಿ ರೂ. ಮೌಲ್ಯದ 4 ಕೆ.ಜಿ. ಡ್ರಗ್ಸ್ ಅನ್ನು
ಶೆಟ್ಟಿಹಳ್ಳಿಯಲ್ಲಿ ವಶಪಡಿಸಿಕೊಂಡಿದ್ದಾರೆ.

ಕ್ಷಿಪ್ರ ಪಡೆಯವರು ಜೇವರ್ಗಿಯಲ್ಲಿ 18,200 ಕೆ.ಜಿ. ಅಡಿಕೆ ಇದ್ದ 260 ಚೀಲಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 19,87,440 ಆಗಿದೆ ಎಂದು ಅಂದಾಜಿಸಲಾಗಿದೆ.ಶಿವಮೊಗ್ಗದ ಸೀಗೆಹಟ್ಟಿಯಲ್ಲಿ 12,50,000 ರೂ. ಮೌಲ್ಯದ ಬಟ್ಟೆ, ಸ್ಟೀಲ್ ಮತ್ತು ಎಲೆಕ್ಟ್ರಿಕ್ ವಸ್ತುಗಳನ್ನು ಅಕ್ರಮ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ತಂಡದವರು ವಶಪಡಿಸಿಕೊಂಡಿದ್ದಾರೆ.

ಸ್ಥಿರ ಕಣ್ಗಾವಲು ತಂಡದವರು ಮೈಸೂರು ರೈಲ್ವೆ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 11,59,235 ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ.ಅಬಕಾರಿ ಇಲಾಖೆಯವರು 9,54,31,134 ರೂ. ಮೌಲ್ಯದ 56,817.3 ಲೀ ಮದ್ಯವನ್ನು ಹಾಸನ ಲೋಕಸಭಾ ಕ್ಷೇತ್ರದಲ್ಲಿ ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು