LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಕ್ಕಳ ಮನಸಲ್ಲಿ ಸಂಘರ್ಷ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಅಂತ ಹೇಳುತ್ತಿದ್ದೇವೆ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ.

ಬಡವರಿಗೆ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಎಂಪಿ ಸ್ಥಾನ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಫಲಿತಾಂಶ ಬರಲಿದೆ. ಸತ್ಯ ಏನಿದೆ ಅಂತ ಗೊತ್ತಾಗಲಿದೆ.

ಅವರಿಗೂ ಸತ್ಯ ಗೊತ್ತಿದೆ. ಅದಕ್ಕಾಗಿ ಅವರು ಕೇಂದ್ರ ರಾಜ್ಯ ಸರ್ಕಾರದ ನಡುವೆ ಕಂದಕ ಸೃಷ್ಟಿಸಲು ಮುಂದಾಗಿದ್ದಾರೆ. ಈಗಾಗಲೇ ಭಾರತದ ಜನರು ಬಿಜೆಪಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನ ನಾಯಕರಾದ ಕಮಲ್ ನಾಥ್ ಸೇರಿದಂತೆ ಅನೇಕ ಹಿರಿಯ ನಾಯಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು