ಬೆಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ ಪರಿಣಾಮ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಔಒಖ ಶೀಟ್ ಗೊಂದಲ ಮತ್ತು ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದ್ದಾರೆ.ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್. ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ, ತನ್ನ ಇಲಾಖೆಯ ಕೆಲಸವನ್ನು ಕಡೆಗಣಿಸಿದ್ದರಿಂದ ಇಂತಹ ಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.ಗೊಂದಲ ಉಂಟಾದ ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಯಾವುದೇ ವಿಳಂಬ ಮಾಡದೆ ಮರು ಪರೀಕ್ಷೆ ನಡೆಸಬೇಕು. ಜೊತೆಗೆ, ಈ ಪ್ರಕರಣ
ದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳು ರಾಜ್ಯದ ಯುವಕರಿಗೆ ನ್ಯಾಯ ಒದಗಿಸಬೇಕು. ಈ ಗೊಂದಲಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.