LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮೋದಿ ಸ್ವಾಗತಕ್ಕೆ ಕಾಂಗ್ರೆಸ್-ಬಿಜೆಪಿ ಫ್ಲೆಕ್ಸ್ಗಳ ವಾರ್


ಬೆಂಗಳೂರು: ನಮ್ಮ ಮೆಟ್ರೋ ವಿಸ್ತರಣೆ ಹಾಗೂ ಉದ್ಘಾಟನೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಫ್ಲೆಕ್ಸ್ ಹಾಗೂ ಬಂಟಿAಗ್ಸ್ ಅಳವಡಿಸುವ ವಿಚಾರದಲ್ಲಿ ಪೈಪೋಟಿ ಜೋರಾಗಿದೆ.ಈ ಹಿಂದೆ ಮೆಟ್ರೋ ಕ್ರೆಡಿಟ್ ವಿಚಾರವಾಗಿ ನಡೆದಿದ್ದ ರಾಜಕೀಯ ವಾಕ್ಸಮರದ ಬೆನ್ನಲ್ಲೇ ಇದೀಗ ಉದ್ಘಾಟನೆಯ ಸ್ವಾಗತದ ವಿಚಾರದಲ್ಲೂ ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ನಾಯಕರ ಪರವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡೈರಿ ಸರ್ಕಲ್‌ನಿಂದ ಪ್ರಧಾನಿ ನರೇಂದ್ರ ಮೋದಿಅವರು ಉದ್ಘಾಟಿಸಲಿರುವ ಮೆಟ್ರೋ ಮಾರ್ಗದುದ್ದಕ್ಕೂ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಬೃಹತ್ ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರುವ ಫ್ಲೆಕ್ಸ್ಗಳನ್ನ ಹಾಕಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ಸ್ವಾಗತದ ಫ್ಲೆಕ್ಸ್ಗಳನ್ನ ಅಳವಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮಾರ್ಗದುದ್ದಕ್ಕೂ ಪಕ್ಷದ ಭಾವುಟಗಳನ್ನು ಹಾಕುವ ಮೂಲಕ ಗಮನ ಸೆಳೆದಿದ್ದರೆ, ಕಾಂಗ್ರೆಸ್ ಕಾರ್ಯಕರ್ತರು ಬಂಟಿಂಗ್ಸ್ಗಳನ್ನು ಅಳವಡಿಸಿದ್ದಾರೆ. ಹೀಗೆ ಮೆಟ್ರೋ ಮಾರ್ಗದುದ್ದಕ್ಕೂ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಫ್ಲೆಕ್ಸ್ಗಳು, ಬಂಟಿಂಗ್ಸ್ಗಳು ಹಾಗೂ ಭಾವುಟಗಳು ರಾರಾಜಿಸುತ್ತಿದ್ದು, ಉದ್ಘಾಟನೆಗೂ ಮುನ್ನವೇ ರಾಜಕೀಯ ಪೈಪೋಟಿಗೆ ಸಾಕ್ಷಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST