ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಾಕಷ್ಟು ಲೋಪದೋಷಗಳಿಗೆ ಕಾರಣರಾಗಿರುವ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್‌ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿದೆ.ದೇಶಾದ್ಯಂತ ಇಂದು ಪ್ರತಿಭಟನೆ ನಡೆಸಲು ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನೀಡಿದ್ದ ಕರೆ ಮೇರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ. ಈ ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ. ಜ್ಞಾನೇಶ್‌ಕುಮಾರ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಹೇಳಿರುವ ಹರಿಪ್ರಸಾದ್, ಈಗಾಗಲೇ ವಿವಿಧ ರಾಜ್ಯದಲ್ಲೂ ಸೇರಿ ಒಟ್ಟು 13 ಕೋಟಿ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದಕ್ಕೆಲ್ಲಾ ಹೊಣೆ ಆಯೋಗದ ಲೋಪದೋಷಗಳೇ ಕಾರಣ. ಇದರ ಹಿಂದೆ ಕೇಂದ್ರ ಸರ್ಕಾರದ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.