LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸದನದಲ್ಲಿ ಗದ್ದಲ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ಬಿಜೆಪಿ ಪಟ್ಟು | ಕಾಂಗ್ರೆಸ್ಸಿಗರ ಆಕ್ಷೇಪ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಚರ್ಚೆಗೆ ಅವಕಾಶ ಮಾಡಿಕೊಡ ಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ
ನಾಯಕ ಆರ್. ಅಶೋಕ್ ವಿಧಾನಸಭೆಯಲ್ಲಿಂದು ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಮನವಿ ಮಾಡಿದ ಸಂದರ್ಭದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ವಾಗ್ದಾಳಿ ನಡೆದು ಗದ್ದಲದ ಪರಿಸ್ಥಿತಿ ನಿರ್ಮಾಣವಾಯಿತು.

ಮುಂದುವರೆದು ಮಾತನಾಡಿದ ಅಶೋಕ್, ಬೆಳಗಾವಿ ಅಧಿವೇಶನದಲ್ಲೇ ಚರ್ಚೆಯಾಗಬೇಕಿತ್ತು ಆದರೆ ತಾವು ವಿರೋಧ ಪಕ್ಷದವರ ಎತ್ತಿದ ಪ್ರಶ್ನೆಗೆ ಗಮನ ನೀಡದೆ ಆಡಳಿತ ಪಕ್ಷದ ಕಡೆ ವಾಲಿದಿರಿ ಎಂದು ಹೇಳಿದ ಅವರು, ಮಹಿಳೆಯ ಬೆತ್ತಲೆ ಪ್ರಕರಣ, ಹಾವೇರಿಯಲ್ಲಿ ಸಾಮೂಹಿಕ ಅತ್ಯಾಚಾರ, ಕುಕ್ಕರ್ ಬಾಂಬ್ ಬ್ಲಾಸ್ಟ್...

ಮೊದಲಾದ ಘಟನೆಗಳು ರಾಜ್ಯದ ಜನರನ್ನು ಆತಂಕಕ್ಕೆ ದೂಡಿವೆ, ಸರ್ಕಾರ ಬದುಕಿದೆಯೋ ಸತ್ತಿದೆಯೋ ಅಂತ ಜನರು ಅಂದುಕೊಳ್ಳುವ ಮಟ್ಟಿಗೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು. ಕಳೆದ ಬಾರಿಯಂತೆ ಆ ಕಡೆ ತಿರುಗದೆ ತಮ್ಮ ಕಡೆ ತಿರುಗಿ ಅಂತ ಅಶೋಕ ಹೇಳುವಾಗ ಉತ್ತರಿಸಲು ಎದ್ದುನಿಂತ ಗೃಹ ಸಚಿವ ಜಿ ಪರಮೇಶ್ವರ್, ಅಧ್ಯಕ್ಷರು ಎಡ ಬಲ ಯಾವ ಕಡೆಯೂ ತಿರುಗೋದು ಬೇಡ ನೇರವಾಗಿ ನೋಡಲಿ ಎಂದರು.

ಒಂದು ಹಂತದಲ್ಲಿ ಕಲಾಪಪಟ್ಟಿಯಲ್ಲಿರುವಂತೆ ಚರ್ಚೆಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್ ಸದಸ್ಯರು ಆಗ್ರಹಪಡಿಸಿದರು.
ಈ ಸಂದರ್ಭದಲ್ಲಿ ಆಡಳಿತ ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಒಟ್ಟಾರೆ ಇಂದು ಸದನ ಆರಂಭಗೊಳ್ಳುತ್ತಿದ್ದಂತೆ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಒಂದು ಹಂತದಲ್ಲಿ ಮಾತನಾಡಿದ ಸಭಾಧ್ಯಕ್ಷರು ಈಗಾಗಲೇ ನಿಲುವಳಿ ಚರ್ಚೆ ಮೇಲೆ ಮಾತನಾಡಲು ಕೊಬ್ಬರಿ ಬೆಲೆಗೆ ಸಂಬಂಧಪಟ್ಟಂತೆ ನೋಟೀಸ್ ನೀಡಿದ್ದಾರೆ. ಮೊದಲು ಅವರ ನೋಟಿಸ್ ಬಂದಿರುವುದರಿಂದ ಅವರಿಗೆ ಮಾತನಾಡಲು ಅವಕಾಶ ನೀಡುತ್ತೇನೆ. ನಾಳೆ ನೀವು ಮತ್ತೆ ಹೊಸದಾಗಿ ನೋಟಿಸ್ ನೀಡಿ ಎಂದು ಅಶೋಕ್‍ಗೆ ಸೂಚಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು