LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

`ಕೈ' ವಿರುದ್ಧ ಷಡ್ಯಂತ್ರ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ

ದೆಹಲಿ: ಪ್ರಧಾನಿ ಮೋದಿ ಅವರಿಂದ ಕಾಂಗ್ರೆಸ್ ವಿರುದ್ಧ ಷಡ್ಯಂತರ ನಡೆಯುತ್ತಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ವರಿಷ್ಠರು ಆರೋಪಿಸಿದ್ದಾರೆ.ದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಮತ್ತಿತರರು ಮಾತನಾಡಿ, ಕಾಂಗ್ರೆಸ್‍ನ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.

ನಮ್ಮ 250 ಕೋಟಿ ರೂಪಾಯಿ ಹಣವನ್ನು ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮಾಡಲಾಗುತ್ತಿಲ್ಲ. ನಮ್ಮ ಪ್ರಚಾರಕ್ಕಾಗಿಮಾಧ್ಯಮಗಳಲ್ಲಿ ಜಾಹೀರಾತು ನೀಡಬೇಕಾಗಿದೆ. ಬ್ಯಾಂಕಿನ ಖಾತೆಯಲ್ಲಿರುವ ಹಣವನ್ನು ಡ್ರಾ ಮಾಡಲಾಗುತ್ತಿಲ್ಲ. ವಿಪಕ್ಷಗಳನ್ನು ದುರ್ಬಲಗೊಳಿಸುವ ಯತ್ನ ಮಾಡಲಾಗುತ್ತಿದೆ. ಚುನಾವಣಾ ಬಾಂಡ್‍ಗಳಿಂದ ಬಿಜೆಪಿಯ ಖಜಾನೆ ತುಂಬಿದೆ.

ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್‍ಗೆ ಮಾಡಲಾಗಿದೆ. ಚುನಾವಣಾ ಬಾಂಡ್‍ಗಳು ಅಕ್ರಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೇಂದ್ರ ಚುನಾವಣಾ ಆಯೋಗ ಐಟಿ, ಇಡಿ, ಸಿಬಿಐಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

31 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಕಾಂಗ್ರೆಸ್‍ನ ಬ್ಯಾಂಕ್ ಅಕೌಂಟ್ ಸೀಜ್ ಮಾಡಲಾಗಿದೆ. ಯಾವ ಪಕ್ಷಕ್ಕೂ ಇಲ್ಲದ ನಿಯಮ ಕಾಂಗ್ರೆಸ್ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಅನಿವಾರ್ಯ ಪರಿಸ್ಥಿತಿ ಹೀಗೆ ಮುಂದುವರಿದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದು ಅಸಾಧ್ಯತೆ ಮಾತು.

ಚುನಾವಣಾ ಬಾಂಡ್‍ಗಳಿಂದ ಬಿಜೆಪಿಗೆ ಶೇ. 56, ಕಾಂಗ್ರೆಸ್‍ಗೆ ಶೇ. 11ರಷ್ಟು ಸಗ್ರಹವಾಗಿದೆ. ಸಾಂವಿಧಾನಿಕ ಸಂಸ್ಥೆಗಳಿಗೆ ನಾವು ಮನವಿ ಮಾಡುತ್ತೇವೆ. ಆದಷ್ಟೂ ಬೇಗ ನಮ್ಮ ಬ್ಯಾಂಕ್ ಖಾತೆಗಳನ್ನು ರಿಲೀಸ್ ಮಾಡಿ ಎಂದು ಮನವಿ ಹೇಳಿದ್ದಾರೆ.ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸುತ್ತಿದೆ. ಆದಷ್ಟೂ ಬೇಗ ಸತ್ಯ ಹೊರಬರಲಿದೆ ಎಂದಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು