LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೊಡ್ಡಬಳ್ಳಾಪುರ ತಾಲ್ಲೂಕಿಗೆ ಪ್ರವೇಶಿಸಿದ ಸಂವಿಧಾನ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ತಾಲೂಕಿನ ಮೇಳೆ ಕೋಟೆಯಲ್ಲಿ ಮಹಿಳೆಯರಿಂದ ಪೂರ್ಣಕುಂಭದೊಂದಿಗೆ ಸ್ವಾಗತ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಂದಿಬೆಟ್ಟ ಕ್ರಾಸ್ ಮೂಲಕ ಹೆಗ್ಗಡಿಹಳ್ಳಿಗೆ ಪ್ರವೇಶ ಪಡೆಯಿತು.

ಈ ವೇಳೆ ಮಹಿಳೆಯರು ಕಳಶಗಳನ್ನು ಹೊತ್ತು ಮೆರವಣಿಗೆ ಮೂಲಕ ಸ್ವಾಗತಿಸಿದರೆ, ಶಾಲಾ ಮಕ್ಕಳು ಸಂವಿಧಾನ ಕುರಿತ ಜಾಗೃತಿ ಫಲಕಗಳನ್ನ ಹಿಡಿದು ಸಂವಿಧಾನ ಜಾಗೃತಿ ಮೂಡಿಸುವಂತಹ ರಥವನ್ನು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ, ಕಾಲ್ನಡಿಗೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಿಧ ಸಂಘಟನೆಗಳು ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಸಂವಿಧಾನದಿಂದಲೇ ನಾವೆಲ್ಲ ಜೀವಿಸುತ್ತಿದ್ದೇವೆ.

ಜನಸಾಮಾನ್ಯರಿಗೆ ಎಲ್ಲ ರೀತಿಯ ಸ್ಥಾನಮಾನ ನೀಡಿರುವ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯ ಬಂದಾಗ ಎಷ್ಟು ಸಂಭ್ರಮ ಪಟ್ಟಿದ್ದೇವೋ ಅದೇ ರೀತಿ ಸಂಭ್ರಮದ ವಾತಾವರಣ ಇಲ್ಲಿ ಮನೆ ಮಾಡಿದೆ ಎಂದು ಹೆಗ್ಗಡಿಹಳ್ಳಿ ಗ್ರಾ.ಪಂ. ಸದಸ್ಯ ಮುನಿಕೃಷ್ಣಪ್ಪ ಹೇಳಿದರು.

ತಾಲ್ಲೂಕು ಪಂಚಾಯತಿ ಇಒ ಮುನಿರಾಜು ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ವಿಶೇಷವಾದ ಅಭಿಯಾನ. ಈಗಾಗಲೇ ಜಾಥಾ ಕಾರ್ಯಕ್ರಮ ದೇವನಹಳ್ಳಿ, ಹೊಸಕೋಟೆ ಮುಗಿಸಿ ನಮ್ಮ ತಾಲೂಕಿಗೆ ಆಗಮಿಸಿದೆ. ಹೆಗ್ಗಡಿಹಳ್ಳಿ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಿದ್ದಾರೆ.

ಎಲ್ಲ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿದ ಬಳಿಕ ದೊಡ್ಡಬಳ್ಳಾಪುರದಲ್ಲಿ ಬೃಹತ್ ಕಾರ್ಯಕ್ರಮ ನಡೆಸಿ ವಿದಾಯ ಹೇಳಲಾಗುವುದು ಎಂದು ಹೇಳಿದರು.ನಂತರ ಮೆಳೆಕೋಟೆ ಗ್ರಾಮ ಪಂಚಾಯ ವ್ಯಾಪ್ತಿಯ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದ ಮೂಲಕ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮಸ್ಥರು ಸ್ವಾಗತಿಸಿ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಹಿಳೆಯರಿಂದ ರಂಗೋಲಿ, ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಮತ್ತು ಪ್ರಬಂಧ ಸ್ಫರ್ಧೆ ಏರ್ಪಡಿಸಲಾಗಿತ್ತು. ಸ್ಫರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎನ್.ಶ್ರೀನಿವಾಸ್ ಅವರು ಬಹುಮಾನ ವಿತರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥವನ್ನು ಊರಿನ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳ ಮೂಲಕ ಮೆರವಣಿಗೆ ನಡೆಸಲಾಯಿತುವಿದ್ಯಾರ್ಥಿಗಳನ್ನೊಳಗೊಂಡಂತೆ ನಾಮ ಫಲಕಗಳ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಉದ್ದೇಶಗಳು, ಹಿತ ನುಡಿಗಳು, ಅಶೋಕ್ತಿಗಳನ್ನು ತೋರಿಸುವ ಹಾಗೂ ಸಂವಿಧಾನದ ಹಕ್ಕು ಕರ್ತವ್ಯಗಳ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಂವಿಧಾನ ಪೀಠಿಕೆಯನ್ನು ಗ್ರಾಮಸ್ಥರಿಗೆ ಬೋಧಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಯಿತು.ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ
ನಿರ್ದೇಶಕ ಉಮಾಪತಿ ಮಾತನಾಡಿ ಇಂದು ಸಂವಿಧಾನ ಜಾಗೃತಿ ಜಾಥಾ ತಾಲ್ಲೂಕಿಗೆ ಬಂದಿದೆ, ಜಾಥಾದಲ್ಲಿ ತಾಲ್ಲೂಕಿನ ಎಲ್ಲ ಹಂತದ ಅಧಿಕಾರಿಗಳು ಭಾಗವಹಿಸಿದ್ದಾರೆ, ಜನರಿಂದ ಉತ್ತಮ ಸ್ಫಂದನೆ ವ್ಯಕ್ತವಾಗುತ್ತಿದೆ. ಜಾಥಾ ತಾಲೂಕಿನಲ್ಲಿ ಒಂದು ವಾರಗಳ ಕಾಲ ಸಂಚರಿಸಿ ನೆಲಮಂಗಲ ತಾಲ್ಲೂಕಿಗೆ ಹೊರಡಲಿದೆ ಎಂದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯಹನುಮಣ್ಣ,ಮೆಳೆಕೋಟೆ ಗ್ರಾ.ಪಂ.ಅದ್ಯಕ್ಷ ಬಿ. ಎನ್. ಶ್ರೀನಿವಾಸ್ ಜೆಡಿಎಸ್ ಮುಖಂಡ ಗೌರಿಶ್, ಕಾಂಗ್ರೆಸ್ ಜಿಲ್ಲಾ ಉಪಾದ್ಯಕ್ಷರಾದ ಎಸ್ ಡಿ ಮುನಿರಾಜು, ಜಾಗೃತಿ ಮತ್ತು ಉಸ್ತುವಾರಿ ಸದಸ್ಯ ರಾಮಣ್ಣ, ಮಂಜುನಾಥ, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ವಾರ್ಡನ್ ಗಳು, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು