LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪೊಲೀಸ್ ಕಲ್ಯಾಣ ಮಂಟಪ ನಿರ್ಮಾಣ

ಬೆಂಗಳೂರು : ಪೊಲೀಸರ ಕುಟುಂಬಕ್ಕೆ ಅನುಕೂಲವಾಗುವ ಸಲುವಾಗಿ ಥಣಿಸಂದ್ರದಲ್ಲಿರುವ ಸಿಎಆರ್ ಉತ್ತರ ವಿಭಾಗದ ಆಟದ ಮೈದಾನದಲ್ಲಿ ಪೊಲೀಸ್ ಕಲ್ಯಾಣ ಮಂಟಪವನ್ನು ಕಟ್ಟಲು ರಾಜ್ಯ ಪೊಲೀಸ್ ಇಲಾಖೆ 10 ಕೋಟಿ ಅನುದಾನ ನೀಡಿದೆ ಎಂದು ನಗರ ಪೊಲೀಸ್ ಆಯುಕ್ತ ಸಿಮಂತ್ ಕುಮಾರ್ ಸಿಂಗ್ ರವರು ತಮ್ಮ ಮಾಸಿಕ ಕವಾಯಿತು ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
ಆಯುಕ್ತರ ಮಾಸಿಕ ಕವಾಯಿತಿನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಆಯುಕ್ತರು ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಕಲ್ಯಾಣ ಮಂಟಪವನ್ನು ಕಟ್ಟಲು ನಕ್ಷೆ ಹಾಗೂ ಇನ್ನೂ ಇತರೆ ಕಾರ್ಯಗಳು ನಡೆದಿವೆ ಎಂದು ತಿಳಿಸಿದರು, ಆದಷ್ಟು ಬೇಗನೆ ಕಟ್ಟಡವನ್ನು ಕಟ್ಟಿ ಪೊಲೀಸ್ ಸಿಬ್ಬಂದಿಗಳಿಗೆ ಉಪಯೋಗವಾಗಲು ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ 53 ಜನ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಪ್ರಸಂಶನಪಾತ್ರವನ್ನು ಸಹ ವಿತರಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸ ಬೇಕೆಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಸಂಚಾರ ವ್ಯವಸ್ಥೆಯಲ್ಲಿ, ಕಳ್ಳತನ ಪ್ರಕರಣವಿನಲ್ಲಿ, ಗಲಾಟೆ ಇರಲಿ ಯಾವುದೇ ಕ್ಷಣದಲ್ಲಿ ಪೊಲೀಸರು ಸಾರ್ವಜನಿಕರಿಗೆ ಸ್ಪಂದಿಸುವAತಾಗಿರಬೇಕೆAದು ತಿಳಿಸಿದರು.
ಏನ್ ಜಿ ಓ ಸಂಸ್ಥೆಯವರು ಮಕ್ಕಳನ್ನು ಸಹ ಇಂದು ಬೆಳಿಗ್ಗೆ ಪೊಲೀಸರ ಕವಾಯಿತನ್ನು ವೀಕ್ಷಿಸಲು ಕರೆದುಕೊಂಡು ಬಂದಿದ್ದರು. ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಸೈದುಲ್ಲಾ ಅಡವತ್ ರವರ ಮಾರ್ಗದರ್ಶನದಲ್ಲಿ ಕವಾಯಿತು ಉತ್ತಮವಾಗಿತ್ತು ಎಂದು ಆಯುಕ್ತರು ಸಂತೋಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ಎಲ್ಲಾ ಕಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಕುಟುಂಬ ವರ್ಗದ ಸದಸ್ಯರುಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು