LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಣದೀಪ್ ರಣತಂತ್ರ ಉಪಚುನಾವಣೆ ಕೈ ಟಿಕೆಟ್ ಹಂಚಿಕೆ ಪ್ರಮುಖರೊಂದಿಗೆ ಸಮಾಲೋಚನೆ ಸಭೆ

ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಸಂಬಂಧ ಕಾಂಗ್ರೆಸ್ ಪಕ್ಷದ ವತಿಯಿಂದ ಅಭ್ಯರ್ಥಿಗಳ ಆಯ್ಕೆ ಮಾಡಲು ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಮುಖ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಸುರ್ಜೇವಾಲಾ ಪಕ್ಷದ ವತಿಯಿಂದ ಚುನಾವಣೆಗಾಗಿ ರಚಿಸಲಾಗಿರುವ ಚುನಾವಣಾ ಉಸ್ತುವಾರಿ ವೀಕ್ಷಕರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ತದನಂತರ ದಾವಣಗೆರೆ ಹಾಗೂ ಬಾಗಲಕೋಟೆ ಜಿಲ್ಲಾ ಪಕ್ಷದ ಪ್ರಮುಖರೊಂದಿಗು ಸಭೆ ನಡೆಸಿ ಇಂದು ರಾತ್ರಿ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯಾರಾಗಬೇಕು ಎಂಬುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯೊAದಿಗೆ ಅವರೊಂದಿಗೆ ಸಮಾಲೋಚನೆ ನಡೆಸುವವರು ನಾಳೆಯೂ ಬೆಂಗಳೂರಿನಲ್ಲಿದ್ದು ಪಕ್ಷದ ಹಲವರೊಂದಿಗೆ ಸಂಪರ್ಕಿಸಿ ಚರ್ಚೆ ನಡೆಸಲಿದ್ದಾರೆ. ಒಟ್ಟಾರೆ ಈ ವಿಧಾನಸಭೆಯ ಉಪಚುನಾವಣೆ ಸಂಬಂಧ ಎರಡು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಪಕ್ಷದ ಹಿರಿಯ ಮುಖಂಡ ಹಾಗೂ ಗೃಹಸಚಿವ ಪಕ್ಷದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯಾವುದೇ ತೊಡಕ್ಕಿಲ್ಲ ಆದರೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬAಧ ಚರ್ಚೆ ನಡೆಸಲಾಗುತ್ತಿದೆ. ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಸುರ್ಜೇವಾಲಾ ಅವರೊಂದಿಗೆ ಪಕ್ಷದ ಪ್ರಮುಖರು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಗೂ ಮೊದಲೇ ಸಚಿವ ಎಸ್ ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಅವರು ನಾಮಪತ್ರಿಕೆ ಸಲ್ಲಿಕೆ ಸಂಬAಧ ಪ್ರತಿಕ್ರಿಯಿಸಿ, ನಾಮಪತ್ರ ಸಲ್ಲಿಕೆಗೆ ಯಾರೂ ಬೇಕಾದರೂ ಸಲ್ಲಿಸಬಹುದು. ಕೆಲವರು ಯಾರೋ ಮುಹೂರ್ತ ಇಟ್ಟಿರುತ್ತಾರೆ. ಆ ಸಮಯಕ್ಕೆ ಅವರು ನಾಮಪತ್ರ ಸಲ್ಲಿಸಬಹುದು. ಪಕ್ಷದಲ್ಲಿ ಯಾರು ಯಾರನ್ನೂ ಬ್ಲ್ಯಾಕ್ ಮೇಲ್ ಮಾಡಲು ಆಗುವುದಿಲ್ಲ. ಒತ್ತಡ ಹೇರಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಸಂಬಂಧ ಹಗ್ಗಜಗ್ಗಾಟ ನಡೆಯುತ್ತಲೇ ಇದ್ದು ಸುರ್ಜೇವಾಲಾ ಅವರ ನಡೆಯ ಮೇಲೆ ಎಲ್ಲರೂ ಕಣ್ಣಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು