LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮುಂದುವರಿದ ಪ್ರತಿಪಕ್ಷಗಳ ಪ್ರತಿಭಟನೆ


ಡಾ.ಜಿ.ವೈ. ಪದ್ಮನಾಗರಾಜು
ಬೆಂಗಳೂರು: ಕಳಂಕಿತ ಸಚಿವ ಬಿ. ನಾಗೇಂದ್ರ ಅವರನ್ನು ಮಂತ್ರಿಸ್ಥಾನದಿAದ ಕೈಬಿಡುವಂತೆ ಒತ್ತಾಯಿಸಿ ಅಧಿವೇಶನದಲ್ಲಿ ಜೆಡಿಎಸ್ ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆ ಇಂದು ಮುಂದುವರಿದಿದೆ.ಕೈಗೆ ಕಪ್ಪು ಪಟ್ಟಿ ಕಟ್ಟಿ ಸದನಕ್ಕೆ ಆಗಮಿಸಿರುವ ವಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ನಾಗೇಂದ್ರ ಅವರನ್ನು ಕೈಬಿಡುವಂತೆ ಆಗ್ರಹಿಸಿದರು. ಒಂದು ಹಂತದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ನಿನ್ನೆ ಸಚಿವ ಪರಮೇಶ್ವರ್ ಅವರು ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ನಾಗೇಂದ್ರ ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಅವರ ವಿರುದ್ಧ 24 ಪ್ರಕರಣವಿರುವ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಸದನದಲ್ಲಿ ಹೇಳಿದ್ದಾರೆ. ಈ ಎಲ್ಲದರ ಮಧ್ಯೆ ಸಭಾಧ್ಯಕ್ಷರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು. ಪ್ರಶ್ನೋತ್ತರ ಕಲಾಪದಲ್ಲಿ ಕೆಲವು ಸದಸ್ಯರು ಪಾಲ್ಗೊಳ್ಳಲಿಲ್ಲ. ಆದರೆ ನಯನ ಮೋಟಮ್ಮ ಅವರು ತಮ್ಮ ಪ್ರಶ್ನೆಗೆ ಉತ್ತರ ದೊರಕಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಪ್ರತಿಪಕ್ಷಗಳ ಗದ್ದಲ ಮುಂದುವರಿದೇ ಇತ್ತು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST