LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಂದುವರಿದ ಪ್ರತಿಭಟನೆ ನಾವು ಕರಸೇವಕರೇ ನಮ್ಮನ್ನು ಬಂಧಿಸಿ ಪೋಸ್ಟರ್

ಬೆಂಗಳೂರು: ಹುಬ್ಬಳ್ಳಿಯ ಕರಸೇವಕ, ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ ಇಂದು ಮುಂದುವರಿದಿದೆ.

ಇದೀಗ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲೂ ಹೋರಾಟ ಆರಂಭಿಸಿದ್ದು, `ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ' ಎಂಬ ಸಂದೇಶವುಳ್ಳ ಪ್ರೊಫೈಲ್ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ಪ್ರೊಫೈಲ್ ಫೋಟೊ ಬದಲಾಯಿಸಿಕೊಂಡಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ನಾನೊಬ್ಬ ಕರಸೇವಕ ನನ್ನನ್ನು ಬಂಧಿಸಿ ಎಂಬ ಅಭಿಯಾನ ಇಂದಿನಿಂದ ಶುರುವಾಗಿದೆ. ಕರಸೇವೆಯಲ್ಲಿ ಭಾಗಿಯಾದವರು ಇವತ್ತಿಗೂ ಇದ್ದಾರೆ. ರಾಮ ಮಂದಿರ ಉದ್ಘಾಟನೆ ಸಂಧರ್ಭದಲ್ಲೇ ಸರ್ಕಾರ ರಾಮ ಭಕ್ತರನ್ನು ಭಯ ಪಡಿಸುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ರಾಮ ಭಕ್ತರನ್ನು ಕ್ರಿಮಿನಲ್‍ಗಳಿಗೆ ಹೋಲಿಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡುವವರು ಕಾಂಗ್ರೆಸ್‍ಗೆ ಅಮಾಯಕರು. ರಾಜ್ಯದ ಹಿಂದೂಗಳ ಪಾಲಿಗೆ ಈ ಸರ್ಕಾರ ಸತ್ತು ಹೋಗಿರುವ ತರಹ ಕಾಣಿಸುತ್ತಿದೆ. ಕೇವಲ ಅಲ್ಪಸಂಖ್ಯಾತರನ್ನು ವೈಭವೀಕರಿಸುವುದರಲ್ಲಿ ತುಷ್ಟೀಕರಣ ಮಾಡುವುದರಲ್ಲಿ ಸರ್ಕಾರ ನಿರತವಾಗಿದೆ. ನನ್ನ ಮೇಲೂ ಹತ್ತಾರು ಕೇಸ್‍ಗಳಿವೆ. ಹಾಗಾದರೆ ನಾನು ಅಪರಾಧಿಯೇ? ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ, ಮುಂದುವರಿಸುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

ಇದಕ್ಕೂ ಮುನ್ನಾ ಅವರು ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆ ಮುಂದೆ ನಾನು ಕರಸೇವಕ ನನ್ನನ್ನು ಬಂಧಿಸಿ ಎಂಬಬಿ ತ್ತಿಪತ್ರ ಹಿಡಿದು ಏಕಾಂಗಿಯಾಗಿ ಪ್ರತಿಭಟನಾ ಧರಣಿ ನಡೆಸಿದರು.ಧರಣಿ ಸ್ವಲ್ಪ ಹೊತ್ತು ನಡೆಸಿದ ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಇದೇ ತರಹದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ನಡೆಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಭಾರತದ ಸನಾತನ ಸಂಸ್ಕೃತಿ ಮತ್ತು ಧರ್ಮದ ಬಗ್ಗೆ ಅರಿವಿನ ಕೊರತೆ ಇರೋದು ನಿಚ್ಚಳವಾಗಿ ಗೊತ್ತಾಗುತ್ತಿದೆ ಎಂದು ಹೇಳಿದರು.

ಭಾರತ ಆದಿಕಾಲದಿಂದಲೂ ಒಂದು ಹಿಂದೂ ರಾಷ್ಟ್ರವಾಗೇ ಗುರುತಿಸಿಕೊಂಡಿದೆ, ಸಾವಿರಾರು ವರ್ಷಗಳಿಂದ ಈ ದೇಶದಲ್ಲಿ ಹಿದೂಗಳು ವಾಸಮಾಡಿಕೊಂಡು ಬಂದಿದ್ದಾರೆ, ಹಿಂದೂಗಳೇ ಇರುವ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಇದು ಹಿಂದೂ ರಾಷ್ಟ್ರವೇ ಎಂದು ರವಿ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟೂರನ್ನು ಯಾವ ಹೆಸರಿನಿಂದ ಗುರುತಿಸುತ್ತಾರೆ? ಎಂದು ಕೇಳಿದ ರವಿ, ಯತೀಂದ್ರಗೆ ಇತಿಹಾಸದ ಜ್ಞಾನ ಇಲ್ಲ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು