LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಂದುವರೆದ ಚಾರಣಿಗರ ರಕ್ಷಣಾ ಕಾರ್ಯ

ಬೆಂಗಳೂರು: ಉತ್ತರಾಖಂಡದ ಸಹಸ್ತ್ರತಲ್‍ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಚಾರಣಿಗರು ಅಪಾಯಕ್ಕೆ ಸಿಲುಕಿದ್ದು, ಈ ಪೈಕಿ 9 ಮಂದಿ ಮೃತಪಟ್ಟಿದ್ದಾರೆ. ಉಳಿದವರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆ ಮುಂದುವರೆದಿದೆ.

ಇಂದು ಬೆಳಗಿನ ಜಾವ ಮತ್ತೆ ನಾಲ್ವರ ಶವ ಪತ್ತೆಯಾಗಿದೆ. ಮತ್ತೊಂದೆಡೆ ಬೆಂಗಳೂರಿಗೆ ಕನ್ನಡಿಗರ ಶವಗಳನ್ನು ತರುವ ಬಗ್ಗೆ ಉತ್ತರಾಖಂಡ ರಾಜ್ಯದ ಮುಖ್ಯ ಕಾರ್ಯದರ್ಶಿ ರಾಧಾ ರತೂರಿ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಕಾರ್ಯದರ್ಶಿ ರಂಜಿತ್ ಸಿನ್ಹಾ ಜೊತೆ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಡೆಹ್ರಾಡೂನ್‍ನಲ್ಲಿ ಸಭೆ ನಡೆಸಿದ್ದು ಸಭೆ ಯಶಸ್ವಿಯಾಗಿದೆ.

ಇಂದು ಬೆಳಗ್ಗೆ ಮತ್ತೆ ನಾಲ್ವರ ಶವ ಸಿಕ್ಕಿದ್ದು ಅವರನ್ನು ಪದ್ಮನಾಭ, ವೆಂಕಟೇಶ್ ಪ್ರಸಾದ್, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ ಎಂದು ಗುರುತಿಸಲಾಗಿದೆ. ಉತ್ತರಕಾಶಿಯ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ತಯಾರಿ ನಡೆದಿದೆ. ಬೆಂಗಳೂರಿಗೆ ಕನ್ನಡಿಗರ ಮೃತದೇಹ ರವಾನೆ ಬಗ್ಗೆ ಉತ್ತರಖಂಡ ಅಧಿಕಾರಿಗಳ ಜೊತೆ ನಡೆದ ಮಾತುಕತೆ ಯಶಸ್ವಿಯಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಬೆಂಗಳೂರಿಗೆ ಮೃತದೇಹ ರವಾನೆ ಮಾಡುವೆ ಸಾಧ್ಯತೆ ಇದೆ ಎಂದು ಟ್ವಿಟರ್ ಮೂಲಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ.ಇಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಕಾಶಿಯಿಂದ ಡೆಹ್ರಾಡೂನ್‍ಗೆಎಲ್ಲಾ 9 ಮೃತದೇಹಗಳ ಏರ್ ಲಿಫ್ಟ್ ಮಾಡಲಾಗುತ್ತೆ. ಮೃತದೇಹಗಳನ್ನು ಸ್ಥಳಾಂತರಿಸಲು ಏರ್ ಕ್ರಾಫ್ಟ್ ವ್ಯವಸ್ಥೆ ಮಾಡುವಂತೆ ಉತ್ತರಾಖಂಡ ಸರ್ಕಾರಕ್ಕೆ ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದು ಏರ್ ಕ್ರಾಫ್ಟ್ ವ್ಯವಸ್ಥೆ ಮಾಡಲು ಉತ್ತರಾಖಂಡ ಸರ್ಕಾರ ಒಪ್ಪಿದೆ. ಹೀಗಾಗಿ ಮಧ್ಯಾಹ್ನ ಡೆಹ್ರಾಡೂನ್‍ಗೆ ಮೃತದೇಹಗಳು ತಲುಪಿದ ನಂತರ ಇಂದು ಸಂಜೆಯೇ ಡೆಹ್ರಾಡೂನ್ ನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. 5 ಚಾರಣಿಗರನ್ನು ಇಂದು ಬೆಳಗ್ಗೆ ಹೆಲಿಕಾಫ್ಟರ್ ಮೂಲಕ ಡೆಹ್ರಾಡೂನ್‍ಗೆ ಸ್ಥಳಾಂತರ ಮಾಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು