LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕನಕಪುರ ತಾಲ್ಲೂಕಿಗೆ ದೇಗುಲ ಮಠದ ಕೊಡುಗೆ ಅನನ್ಯ: ಎಂ ಬಿ ಪಾಟೀಲ್

ಕನಕಪುರ: ಬೆಂಗಳೂರು ಸೀಮೆಯ ಭಾಗವೇ ಆಗಿರುವ ಕನಕಪುರದಲ್ಲಿ ಇಲ್ಲಿನ ವೀರಶೈವ ಲಿಂಗಾಯತ ಪರಂಪರೆ ಯ ದೇಗುಲ ಮಠವು ಮಾಡಿರುವ ರಚನಾತ್ಮಕ ಕಾರ್ಯ ಗಳು ಕ್ರಾಂತಿಕಾರಕವಾಗಿವೆ,ಈ ಮಠವು ಮುಂದಿನ ದಿನ ಗಳಲ್ಲಿ ಈ ಭವ್ಯ ಪರಂಪರೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು, ಇದಕ್ಕೆ ತಮ್ಮಿಂದಾಗುವ ನೆರವನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಇತ್ತೀಚೆಗೆ ಶಿವೈಕ್ಯರಾದ ಮಠದ ಶ್ರೀಗಳಾಗಿದ್ದ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪುಣ್ಯ ಸ್ಮರಣೆ ಪೂರ್ವಭಾವಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಲಿಂಗೈಕ್ಯ ಪೂಜ್ಯ ಶ್ರೀ ಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಶ್ರೀ ಗಳ ಆತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಅವರು ಶಿಕ್ಷಣ, ಆಶ್ರಯ, ದಾಸೋಹಗಳ ಸಮಾಜಮುಖಿ ಪರಂಪರೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಸಿದ್ಧಗಂಗಾ ಮಠಕ್ಕೆ ಭವ್ಯವಾದ ಹಿನ್ನೆಲೆ ಇದೆ. ಅಲ್ಲಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ದೂರದೃಷ್ಟಿಯಿಂದ ಈ ಪರಿಕಲ್ಪನೆಯು ಮೇಲ್ಪಂಕ್ತಿ ಯಾಯಿತು ಎಂದು ಸ್ಮರಿಸಿದರು.ಉತ್ತರ ಕರ್ನಾಟಕದಲ್ಲಿ ಶಿರಸಂಗಿ ಲಿಂಗರಾಜ ಪ್ರಭುಗಳು 1904ರಷ್ಟು ಹಿಂದೆಯೇ ಲಿಂಗಾಯತ ಮಠಗಳ ಮೂಲಕ ಶೈಕ್ಷಣಿಕ ಸಂಸ್ಥೆಗಳ ಆರಂಭಕ್ಕೆ ನಾಂದಿ ಹಾಡಿದರು. ಇದನ್ನು ಅನುಸರಿಸಿ ಕೆಎಲ್‌ಇ ಸೊಸೈಟಿ, ಬಿಎಲ್ ಡಿಇ ಮುಂತಾದವು ಅಸ್ತಿತ್ವಕ್ಕೆ ಬಂದವು. ಮೈಸೂರು ಭಾಗದಲ್ಲಿ ಇಲ್ಲಿನ ಮಹಾರಾಜರು ಪ್ರಗತಿಗೆ ಮುನ್ನುಡಿ ಬರೆದರು. ಸ್ಥಳೀಯವಾಗಿ ದೇಗುಲ ಮಠವು ಇಂತಹ ಹಾದಿಯಲ್ಲಿ ದಾಪುಗಾಲಿಟ್ಟಿತು ಎಂದು ಅವರು ನುಡಿದಿದ್ದಾರೆ. ದೇಗುಲ ಮಠವು ಲಿಂಗಾಯತ ಸಂಪ್ರದಾಯಕ್ಕೆ ಸೇರಿದ್ದರೂ ಜಾತ್ಯತೀತ ನೆಲೆಯಲ್ಲಿ ತನ್ನ ಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ಇದರಿಂದ ಕನಕಪುರದ ಪರಿಸರದಲ್ಲಿ ಇದರ ಬಗ್ಗೆ ಜನರ ವಿಶ್ವಾಸ ಅದಮ್ಯವಾಗಿದೆ,ಈ ನಿಟ್ಟಿನಲ್ಲಿ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಕೊಡುಗೆ ಮೌಲಿಕ ವಾಗಿದೆ ಎಂದು ಅವರು ಸ್ಮರಿಸಿದರು.ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ರೈಲ್ವೆ ಸಚಿವ ವಿ. ಸೋಮಣ್ಣ ಪೂಜ್ಯ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಎಲ್ಲಾ ವರ್ಗದ ಜನರು, ಗಣ್ಯರು ಸಹಕರಿಸಬೇಕೆಂದು ಎಂದು ಕೋರಿದರು ದೇಗುಲಮಠದ ಶ್ರೀ ಚನ್ನಬಸವ ಸ್ವಾಮೀಜಿ ಗಳು, ಬೆಂಗಳೂರಿನ ಮಾಜಿ ಉಪ ಮೇಯರ್ ಪುಟ್ಟರಾಜು ಸಮುದಾಯದ ಮುಖಂಡ ಮಲ್ಲಿಕಾರ್ಜುನ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು