LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪೆನ್‍ಡ್ರೈವ್ ನಕಲಿಸುವುದು, ಹಂಚುವುದು ಪಾಪದ ಕೆಲಸ: ಹೈಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್‍ಗಳನ್ನು ನಕಲಿಸುವುದು ಮತ್ತು ಸೋರಿಕೆ ಮಾಡುವುದೂ ಅತ್ಯಂತ ಅಪಾಯಕಾರಿ ಮತ್ತು ಪಾಪ ಕೆಲಸ ಎಂದು ಹೈಕೋರ್ಟ್ ಸೋಮವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್‍ಗಳನ್ನು ನಕಲಿಸಿ ಹಂಚಿದ್ದ ಪ್ರಮುಖ ಆರೋಪಿ ಶರತ್ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಈ ಅಭಿಪ್ರಾಯಪಟ್ಟಿದ್ದಾರೆ.ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ಪ್ರಕರಣದಲ್ಲಿ ಶರತ್ ಪಾತ್ರವನ್ನು ಸೂಚಿಸುವ ತನಿಖಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇರಿಸಿದರು.

ವಿಶೇಷ ತನಿಖಾ ದಳದ ಅಧಿಕಾರಿಗಳು ಶರತ್ ಅವರಿಗೆ ಸೇರಿದ ಟ್ಯಾಬ್ಲೆಟ್ ಮತ್ತು...ವಿವಿಧ ಸಿಡಿಗಳು, ಡಿವಿಆರ್ ಅನ್ನು ವಶಪಡಿಸಿಕೊಂಡಿದ್ದು, ಶರತ್ ಅವರನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ. ಶರತ್ ಅವರನ್ನು ವಿಚಾರಣೆಗೆ ತೆಗೆದುಕೊಳ್ಳಲು ಕೇವಲ ಮಾಹಿತಿಯಿದ್ದರಷ್ಟೇ ಸಾಕಾಗುವುದಿಲ್ಲ. 30 ದಿನಗಳಾದರೂ ಶರತ್ ವಿರುದ್ಧ ಯಾವುದೇ ಅಪರಾಧಗಳು ಸಾಬೀತಾಗಿಲ್ಲ. ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಂತೆ ಕೋರಿ ಶರತ್ ಹೈಕೋರ್ಟ್‍ಗೆ ಮೆಟ್ಟಿಲೇರಿದ ಬಳಿಕ ತನಿಖಾ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ವಾದಿಸಿದರು.

ಈ ಪ್ರಕರಣ ರಾಜಕೀಯ ದ್ವೇಷದಿಂದ ಹುಟ್ಟಿಕೊಂಡಿದ್ದು, ಶರತ್ ವಿರುದ್ಧ ಯಾವುದೇ ಆರೋಪಗಳೂ ಇಲ್ಲ ಎಂದೂ ಹೇಳಿದರು.ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ಯಾವ ರಾಜಕೀಯ ದ್ವೇಷ ಇರಲಿ. ಇದನ್ನು ಯಾವುದೇ ವ್ಯಕ್ತಿ ಮಾಡಿದ್ದರೂ ಅದು ಪಾಪದ ಕೆಲಸ. ಇಂತಹ ಕೆಲಸದಿಂದ ಪುರುಷ ಏನನ್ನೂ ಕಳೆದುಕೊಳ್ಳುವುದಿಲ್ಲ. ಆದರೆ, ಮಹಿಳೆ ಅವಮಾನಕ್ಕೆ ಒಳಗಾಗುತ್ತಾಳೆಂದು ಅಭಿಪ್ರಾಯಪಟ್ಟಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು