LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ

ಬೆಂಗಳೂರು: ವಿಶ್ವ ವಿಖ್ಯಾತ ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ವಿಜೃಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ. ಜಿಬಿಎ, ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಜೊತೆಗೆ ಕರಗ ಉತ್ಸವ ಸಮಿತಿ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಸಿಎಂ, ಡಿಸಿಎಂ ಕೂಡ ಕರಗದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 15 ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆಯಿದೆ.ಮೈಸೂರಿನ ಜನರಿಗೆ ಮೈಸೂರು ದಸರಾ ಹೇಗೋ ಬೆಂಗಳೂರಿನ ಜನರಿಗೆ ಬೆಂಗಳೂರು ಕರಗ ವರ್ಲ್ಡ್ ಫೇಮಸ್. ಚೈತ್ರ ಹುಣ್ಣಿಮೆಯ ಈ ದಿನ ಸಾವಿರಾರು ವರ್ಷಗಳ ಇತಿಹಾಸ, ಐತಿಹಾಸಿಕ ಹಾಗೂ ಧಾರ್ಮಿಕ ಸಾಂಪ್ರದಾಯಿಕ ಹಿನ್ನೆಲೆ ಇರುವ ಬೆಂಗಳೂರಿನ ಕರಗ ಇಂದು ಅದ್ಧೂರಿಯಾಗಿ ಜರುಗಲಿದೆ. ಮಾರ್ಚ್ 24ರಿಂದ ಆರಂಭವಾಗಿರುವ ಕರಗ ಉತ್ಸವದಲ್ಲಿ ಇಂದು ಕರಗ ಶಕ್ತ್ಯೋತ್ಸವದ ಸಂಭ್ರಮ. ಮಲ್ಲಿಗೆ ಹೂವಿನಿಂದ ಅಲಂಕರಿಸಿದ ಕರಗವನ್ನ 16ನೇ ಬಾರಿಗೆ ಕರಗದ ಪೂಜಾರಿ ಜ್ಞಾನೇಂದ್ರ ಹೊರಲಿದ್ದಾರೆ.
ಇಂದು ರಾತ್ರಿ ಸರಿಸುಮಾರು 12ರ ಬಳಿಕ ಆರಂಭವಾಗುವ ಕರಗ ಉತ್ಸವ ಬೆಳಿಗ್ಗೆವರೆಗೆ ನಡೆಯಲಿದೆ.
ಸಂಜೆ ಕಬ್ಬನ್ ಪಾರ್ಕ್ನಲ್ಲಿರುವ ಕರಗದಗುಂಟೆಯಲ್ಲಿ ಪೂಜೆ ಮಾಡಲಿದ್ದು, ಬಳಿಕ ಅಲ್ಲಿಂದ ಬಂದ ನಂತರ ಕರ್ಪೂರ ಸೇವೆ ನಡೆಯಲಿದೆ. ಸಾವಿರಾರು ಕೆ.ಜಿ ಕರ್ಪೂರ ಸೇವೆಯನ್ನ ಭಕ್ತರು ಮಾಡುತ್ತಾರೆ. ನಂತರ ಬಳೆ ಶಾಸ್ತ್ರ ನಡೆಯಲಿದೆ. ಅದಾದ ಮೇಲೆ ತಾಯಿಯನ್ನು ಆಹ್ವಾನ ಮಾಡಿಕೊಂಡು ಹೂವಿನ ಕರಗದ ದರ್ಶನ ಭಕ್ತರಿಗೆ ತಡರಾತ್ರಿ ಸಿಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು