ಬೆಂಗಳೂರು: ನಕಲಿ ಔಷಧಿ ದಂಧೆಯ ಕಿಂಗ್‌ಪಿನ್ ಪ್ರಶಾಂತ್ ಬಾಬುನನ್ನು ದೆಹಲಿ ಪೊಲೀಸರು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ ಕರ್ನಾಟಕದ ವಿಶೇಷ ತನಿಖಾ ತಂಡ ಆತನನ್ನು ಬಂಧಿಸಿತ್ತು. ಇದೀಗ ದೆಹಲಿಯ ಮೋತಿಬಾಗ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬAಧಿಸಿದಂತೆ ನ್ಯಾಯಾಲಯದ ಅನುಮತಿಯೊಂದಿಗೆ ಆತನನ್ನು ವಶಕ್ಕೆ ಪಡೆಯಲಾಗಿದೆ.ತನಿಖೆಯ ವೇಳೆ ಕ್ಯಾನ್ಸರ್ ರೋಗಿಗಳಿಗೆ ಸಂಬಂಧಿಸಿದ ವಂಚನೆಯ ವಿವರಗಳು ಬಹಿರಂಗವಾಗಿವೆ. ಸುಮಾರು 5 ಲಕ್ಷ ರೂ.ಮೌಲ್ಯದ ಎರಡು ಕ್ಯಾನ್ಸರ್ ಇಂಜೆಕ್ಷನ್ ಖರೀದಿಸಿದರೆ ಕಂಪನಿಯು ಒಂದು ಇಂಜೆಕ್ಷನ್ ಅನ್ನು ಉಚಿತವಾಗಿ ನೀಡುತ್ತಿತ್ತು.