LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ


ಕೋಲ್ಕತ್ತಾ: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡದ ಪರ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಆಡುತ್ತಿರುವ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್  ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೊಗ್ರಾ ಠಾಣೆ ಪೊಲೀಸರು ಅಭಿಷೇಕ್ ಪೊರೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಜೂನ್ ತಿಂಗಳಲ್ಲಿ ಮೊಗ್ರಾ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ವಿರುದ್ಧ ದೂರು ನೀಡಿದ್ದರು. ಕಳೆದ 3.5 ವರ್ಷಗಳಿಂದ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬAಧ ಬೆಳೆಸಿ, ಈಗ ಮದುವೆಗೆ ನಿರಾಕರಿಸಿ ಮೋಸ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.ಖಾಸಗಿ ಕ್ಷಣಗಳ ಫೋಟೋ ಹಾಗೂ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು, ಅದನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಏಪ್ರಿಲ್ 2, 2026 ರಂದು ದೆಹಲಿಗೆ ಹೋದಾಗ ತನಗೆ ಕೊಠಡಿಯಲ್ಲಿ ಬಂದಿಸಿ, ಆಹಾರ ನೀಡದೆ ಕಿರುಕುಳ ನೀಡಿದ್ದರಿಂದ ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದೂ ಯುವತಿ ದೂರಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಅಭಿಷೇಕ್ ಪೊರೆಲ್ ಅವರನ್ನು ತಕ್ಷಣ ಬಂಧಿಸಲು ಹಾಗೂ ಅವರ ಎಲ್ಲಾ ಇಂಟರ್ನೆಟ್/ಇಲೆಕ್ಟಾçನಿಕ್ ಸಾಧನಗಳನ್ನು   ವಶಕ್ಕೆ ಪಡೆಯುವಂತೆ ಜುಲೈ 14 ರಂದು ಆದೇಶಿಸಿತ್ತು. ಆದೇಶದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ.23 ವರ್ಷದ ಅಭಿಷೇಕ್ ಪೊರೆಲ್ ದೇಶೀಯ ಕ್ರಿಕೆಟ್‌ನಲ್ಲಿ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ. 2023 ರಿಂದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡುತ್ತಿರುವ ಇವರು, ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ವಿಕೆಟ್‌ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಈ ಘಟನೆಯು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST