LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪುಸ್ತಕ ಓದುವ ಹವ್ಯಾಸ ಬೆಳಸಿಕೊಳ್ಳಿ: ಎಂ.ವೆಂಕಟೇಶ ಶೇಷಾದ್ರಿ

ಕಂಪ್ಯೂಟರ್, ಮೊಬೈಲ್, ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದು ಬೇಸರದ ಸಂಗತಿ. ಪುಸ್ತಕವನ್ನು ಓದುವುದರಿಂದ ಆಲೋಚನ ಶಕ್ತಿ ಹೆಚ್ಚುತ್ತದೆ. ಪುಸ್ತಕವನ್ನು ಓದುವುದರಿಂದ ಜ್ಞಾನವೃದ್ಧಿಯ ಜೊತೆ ವ್ಯಕ್ತಿತ್ವ ವಿಕಸನವೂ ಆಗುತ್ತದೆ ಎಂದು ಯೂತ್ಸ್ ಫಾರ್ ಜಾಬ್ ನ ಅಧ್ಯಕ್ಷ ಶ್ರೀ ಎಂ ವೆಂಕಟೇಶ ಶೇಷಾದ್ರಿಯವರು ಅಭಿಪ್ರಾಯಪಟ್ಟರು.

ಶ್ರೀಯುತರು ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯವರು ಆಯೋಜಿಸಿದ್ದ ವಿಶ್ವ ಪುಸ್ತಕ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ಜವಾಬ್ದಾರಿಯು ತಂದೆ-ತಾಯಿ ಮತ್ತು ಗುರುಗಳ ಮೇಲೆ ಇದ್ದು ಇದಕ್ಕೆ ಪೂರಕ ವಾತಾವರಣವನ್ನು ಸೃಷ್ಟಿಸಬೇಕು ಎಂದರು.

ಸಂಸ್ಥೆಯ ನಿರ್ದೇಶಕ ಶ್ರೀ ರಾಘವೇಂದ್ರ ಆರ್ ರವರು ಮಾತನಾಡಿ ಪುಸ್ತಕಗಳು ವಿದ್ಯಾರ್ಥಿಗಳು ತಮ್ಮ ಗಮನವನ್ನು ಕೇಂದ್ರೀಕರಿಸಲು ಸಹಕಾರಿಯಾಗುತ್ತದೆ. ಓದುವ ಪ್ರವೃತ್ತಿಯನ್ನು ಬೆಳಸಿಕೊಂಡರೆ ಜೀವನದಲ್ಲಿ ಹೆಚ್ಚಿನ ಯಶಸ್ಸನ್ನು ಸಾಧಿಸಿಬಹುದು ಎಂದರು.ವಿಶ್ವ ಪುಸ್ತಕ ದಿನದಂದು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಶ್ರೀ ಮಾಳವೇಶ್ ಕಾಟಾಂಬ್ಲಿ (ಪ್ರಥಮ) ,ಬಿ ಸೋಮಶೇಖರ ಬಿ (ದ್ವಿತೀಯ) , ಶ್ರೀದೇವಿ ಆರ್ ಬಿ (ತೃತೀಯ) ಮತ್ತು ವಿವೇಕ್ ಎಸ್ ಹಾಗೂ ಸರಸ್ವತಿ ಎಸ್ ಹೆಚ್ ( ಪ್ರೋತ್ಸಾಹಕ) ಈ ಸ್ಪರ್ಧೆಯಲ್ಲಿ ವಿಜೇತರಾದರು. ಕನ್ನಡಪ್ರಭ ಪತ್ರಿಕೆಯ ನಿವೃತ್ತ ಸಂಪಾದಕ ಶ್ರೀಜಯರಾಮ ಅಡಿಗ ರವರು ವಿಜೇತರಿಗೆ ಬಹುಮಾನವನ್ನು ವಿತರಿಸಿದರು.ಈ ವೇಳೆ ಸಂಸ್ಥೆಯ ಉಪನ್ಯಾಸಕರಾದ ಶ್ರೀ ವೆಂಕಟೇಶ್ ಬಾಬು ಮತ್ತು ಶ್ರೀಮತಿ ಅನುಶ್ರೀ ರವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು